Mysore
24
broken clouds

Social Media

ಬುಧವಾರ, 09 ಜುಲೈ 2025
Light
Dark

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಕೃತ್ಯ : ಹೆಚ್‌ಡಿಕೆ

ಮಂಡ್ಯ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದ ಸಂಬಂಧ ಘಟನೆಯ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ ಅವರು  ಮಳವಳ್ಳಿಯಲ್ಲಿ ಟ್ಯೂಶನ್ ಗೆ ಬಂದ 10 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ.
ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದಿದ್ದಾರೆ.

ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್‌ ಮಾಡುವ ಮೂಲಕ ಬಾಲಕಿ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!