ಮಂಡ್ಯ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದ ಸಂಬಂಧ ಘಟನೆಯ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು ಮಳವಳ್ಳಿಯಲ್ಲಿ ಟ್ಯೂಶನ್ ಗೆ ಬಂದ 10 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ.
ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದಿದ್ದಾರೆ.
ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕ ಬಾಲಕಿ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ನವದೆಹಲಿ: ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ಅರ್ನಾಬ್ ಚಂಡಮಾರುತ ನಾಳೆ, ಅಕ್ಟೋಬರ್ 28ರ ಪೂರ್ವಾಹ್ನ ಆಂಧ್ರಪ್ರದೇಶದ ಕರಾವಳಿ ದಾಟುವ ಸಾಧ್ಯತೆಯಿದೆ. ಬಾಪಟ್ಲಾ ಮತ್ತು…
ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ, ಅಂದರೆ ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್…
ಬೆಂಗಳೂರು: ಎಸ್‌ಐಆರ್ ಅಂತಿಮ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ನಿರಂತರ ನವೀಕರಣ ವ್ಯವಸ್ಥೆಯಡಿ…
ಬೆಂಗಳೂರು: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಅವರಿಗೆ…
ಖಾಸಗಿ ಕಂಪೆನಿಗಳು ಕನ್ನಡಿಗರನು ಕಡೆಗಣಿಸಿದರೆ ಸೂಕ್ತಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಸಿದ್ದಾರೆ ಸಿಎಂ ಕನ್ನಡಿಗರ ಹಕ್ಕು ಅವಕಾಶ ಕಾಯುವುದಾಗಿಯೂ ಘೋಷಿಸಿದ್ದಾರೆ! ಹೆಮ್ಮೆ…
ಇತ್ತೀಚೆಗೆ ಯಶಸ್ವಿಯಾಗಿ ಮುಕ್ತಾಯಗೊಂಡ ಈ ವರ್ಷದ ದಸರಾ ಮಹೋತ್ಸವದ ಬಗ್ಗೆ ನಾನಾ ರೀತಿಯ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ದಲಿತ…