ಜಿಲ್ಲೆಗಳು

ಅಪ್ರಾಪ್ತೆ ಮೇಲೆ ಅತ್ಯಾಚಾರ : ಆರೋಪಿಗೆ 22 ವರ್ಷ ಜೈಲು ಶಿಕ್ಷೆ

ಮೊದಲನೇ ಅಪರಾಧಿಗೆ 22 ವರ್ಷ, 2ನೇ ಅಪರಾಧಿಗೆ 3 ವರ್ಷ ಸಜೆ

ಮಂಡ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದು ಹಾಗೂ ಲೈಂಗಿಕ ಕಿರುಕುಳ ನೀಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಮೊದಲನೇ ಅಪರಾಧಿಗೆ 22 ವರ್ಷ ಕಠಿಣ ಸಜೆ, 50 ಸಾವಿರ ರೂ. ದಂಡ ಹಾಗೂ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ 3 ವರ್ಷ ಜೈಲು ಸಜೆ ಹಾಗೂ 19 ಸಾವಿರ ರೂ. ದಂಡ ವಿಧಿಸಿ ಮಂಡ್ಯದ 2ನೇ ಅಧಿಕ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಹಲಗೂರು ಬಳಿಯ ಗ್ರಾಮವೊಂದರ ರವಿ ಹಾಗೂ ಮಹೇಶ್ ಎಂಬವರೇ ಶಿಕ್ಷೆಗೊಳಗಾದವರು.
ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಪಾಲಕರು ಕೂಲಿ ಕೆಲಸಕ್ಕೆಂದು ಹೊರಗೆ ಹೋದ ವೇಳೆ 7ನೇ ತರಗತಿ ವಿದ್ಯಾರ್ಥಿನಿ ಮೇಲೆ ರವಿ ಅತ್ಯಾಚಾರ ಎಸಗಿದ್ದನು. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿಮ್ಮ ತಂದೆ-ತಾಯಿಯನ್ನು ಕೊಲೆ ಮಾಡುವುದಾಗಿ ಬೆದರಿಸಿ ದೈಹಿಕ ಸಂಪರ್ಕ ಹೊಂದಿದ್ದನು. ಪರಿಣಾಮ ಅಪ್ರಾಪ್ತೆ ಗರ್ಭಿಣಿಯಾಗಿದ್ದಳು.
ಇತ್ತ ನನ್ನೊಂದಿಗೂ ದೈಹಿಕ ಸಂಪರ್ಕಕ್ಕೆ ಸಹಕರಿಸುವಂತೆ ಮಹೇಶ್ ಕಿರುಕುಳ ನೀಡಿದ್ದನು. ಇಬ್ಬರ ವಿರುದ್ಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧವಾಗಿ ಇಬ್ಬರು ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ಎ.ನಾಗಜ್ಯೋತಿ ಅವರು ಇಬ್ಬರು ಆರೋಪಿಗಳಿಗೂ ಶಿಕ್ಷೆ ಪ್ರಕಟಿಸಿದ್ದಾರೆ.
ಸರ್ಕಾರಿ ಅಭಿಯೋಜಕಿ ಪಿ.ಕೆ.ಶಕೀಲಾ ಅಬೂಬಕರ್ ಅವರು ವಾದ ಮಂಡಿಸಿದ್ದರು.

andolanait

Recent Posts

ಓದುಗರ ಪತ್ರ:  ಮರ್ಯಾದಾ ಹತ್ಯೆಯಲ್ಲಿ ಜಾತಿ ಜೀವಂತಿಕೆ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…

8 mins ago

ಓದುಗರ ಪತ್ರ:  ಚಲನಚಿತ್ರ ರಂಗದಲ್ಲಿ ಏನಿದು ಗದ್ದಲ?

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…

9 mins ago

ಓದುಗರ ಪತ್ರ: ಚಾಮುಂಡಿಬೆಟ್ಟ ಯಥಾಸ್ಥಿತಿಯಲ್ಲೇ ಇರಲಿ

ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…

12 mins ago

ಓದುಗರ ಪತ್ರ: ಪುಸ್ತಕ ಉಡುಗೊರೆ ಸಂಸ್ಕೃತಿ ಬೆಳೆಸಿ

ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…

26 mins ago

ಪ್ರೀತಿ, ಸೌಹಾರ್ದತೆಯ ಸಂದೇಶ ಸಾರುವ ಕ್ರಿಸ್ತ ಜಯಂತಿ

- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…

1 hour ago

2025 ಸವಿನೆನಪು: ಸ್ಯಾಂಡಲ್‌ವುಡ್ ಏಳು-ಬೀಳು

‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…

3 hours ago