ಮೈಸೂರು: ಸಮಯಕ್ಕೆ ಸರಿಯಾಗಿ ಊಟ-ತಿಂಡಿ ದೊರೆಯದೆ ಇರುವ ಜೊತೆಗೆ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಉಣ ಬಿಡಿಸಿದ ಬೆಳಗಿನ ಉಪಹಾರದಲ್ಲಿ ಇಲಿ ಪ್ರೈ ಮಾಡಿ ಬಡಿಸಿದ್ದು, ಇದರಿಂದಾಗಿ ಕುಪಿತಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಲಯದ ಬ್ಲಾಕ್-೨ನಲ್ಲಿ ಬುಧವಾರ ಬೆಳಿಗ್ಗೆ ಎಂದಿನಂತೆ ಬಾತ್‌ನ್ನು ಸಿದ್ಧಪಡಿಸಿ ವಿದ್ಯಾರ್ಥಿಗಳಿಗೆ ಕೊಡಲಾಗಿದೆ. ಕೆಲವರು ಮಾಮೂಲಿಯಂತೆ ಸವಿದರೆ, ಹಲವರಿಗೆ ಇಲಿಯ ತುಂಡುಗಳು ಕಾಣಿಸಿಕೊಂಡಿದೆ. ಇದರಿಂದ ಗಾಬರಿಗೊಂಡ ವಿದ್ಯಾರ್ಥಿಗಳು ಹಾಸ್ಟೆಲ್‌ನ ಅಡುಗೆ ಸಿಬ್ಬಂದಿಗೆ ತೋರಿಸಿದ್ದಾರೆ. ನಂತರ ತಿಂಡಿ ಮಾಡಿದ್ದ ಪಾತ್ರೆಗಳನ್ನು ನೋಡಿದಾಗ ಇಲಿಯು ಬಿದ್ದಿರುವುದನ್ನು ಗಮನಿಸದೆ ಹೋಗಿದ್ದರಿಂದ ಸೌಟನ್ನು ಆಡಿಸಿದ್ದರಿಂದ ಈ ರೀತಿಯಾಗಿರಬಹುದೆಂದು ಹೇಳಿ ವಾಪಸ್ ತಿಂಡಿಯನ್ನು ಪಡೆದು ಬದಲಿ ವ್ಯವಸ್ಥೆ ಮಾಡಿಕೊಡುವ ಮಾತನ್ನು ಹೇಳಿದ್ದಾರೆ. ಆದರೆ, ಕ್ಯಾಂಟೀನ್ ನಡೆಸುವವರ ಹಾಗೂ ಹಾಸ್ಟೆಲ್ ನಿರ್ವಹಣೆ ಮಾಡುವವರ ವಿರುದ್ಧ ಆಕ್ರೋಶಗೊಂಡ ವಿದ್ಯಾರ್ಥಿಗಳು ಗಂಗೋತ್ರಿ ಕ್ಯಾಂಪಸ್‌ನ ಪ್ರವೇಶ ದ್ವಾರದ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು.
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…
ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…