ಜಿಲ್ಲೆಗಳು

ಸ್ವಾತಂತ್ರ್ಯ ಹೋರಾಟಗಾರ್ತಿ ಕುಯಿಲಿ ಸಂಸ್ಮರಣೆ

ಶ್ರೀರಂಗಪಟ್ಟಣ: ಪಟ್ಟಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ಕುಯಿಲಿ ಅವರ ಸಂಸ್ಮರಣೆ ಕಾರ್ಯಕ್ರಮ ನಡೆಯಿತು.

ಪಟ್ಟಣದ ಪುರಸಭೆ ವೃತ್ತದಲ್ಲಿ ಅರುಂಧತಿಯ ಮಹಾಸಭಾ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕುಯಿಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಕುಯಿಲಿ ಪರ ಘೋಷಣೆಗಳು ಮೊಳಗಿದವು. ಇದಕ್ಕೂ ಮುನ್ನ ಗಾಂಧಿನಗರದಿಂದ ಪುರಸಭೆ ವೃತ್ತದವರೆಗೆ ಕುಯಿಲಿ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು.

ಅರುಂಧತಿ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಪುರಸಭೆ ವಾಜಿ ಅಧ್ಯಕ್ಷ ಆರ್.ಕೃಷ್ಣ ಮಾತನಾಡಿ, ಕುಯಿಲಿ ಅವರು ೧೬ನೇ ಶತಮಾನದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ. ಆರ್ಕಾಟ ನವಾಬನ ಜತೆ ಸೇರಿ ಬ್ರಿಟಿಷರು ನೀಡುತ್ತಿದ್ದ ಉಪಟಳವನ್ನು ತಪ್ಪಿಸಲು ಅರುಂಧತಿಯ ಸಮಾಜದ ಕುಯಿಲಿ ಯುದ್ಧ ಸಾಮಗ್ರಿಗಳನ್ನು ನಾಶ ಮಾಡಿ ಪ್ರಾಣಾರ್ಪಣೆ ಮಾಡಿದ್ದಾರೆ. ವಿಜಯದಶಮಿ ದಿನ ಅವರ ಬಲಿದಾನವಾಗಿದ್ದು, ಅವರ ನೆನಪಿಗಾಗಿ ಸರ್ಕಾರ ಇನ್ನು ಮುಂದೆ ವಿಜುಂದಶಮಿ ದಿನ ಕಾರ್ಯಕ್ರಮ ರೂಪಿಸಬೇಕು ಎಂದು ಒತ್ತಾಯಿಸಿದರು.

ಅರುಂಧತಿ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ರಂಗಸ್ವಾಮಿ, ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಅರಕಲಗೂಡು ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜು, ಕೆ.ಆರ್.ಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜು, ಕೊಡ್ಲಿಪೇಟೆ ರಂಗಸ್ವಾಮಿ, ಮಳವಳ್ಳಿ ನಾಗರಾಜು, ಮಹಿಳಾ ಘಟಕದ ಅಧ್ಯಕ್ಷರಾದ ಕೆ.ರೇಖಾ, ಮುಖಂಡರಾದ ಆರ್.ವಾದೇಶ್ವರ, ಸತೀಶ್, ಮಹೇಶ್, ವಿಜ್‌ಂ, ನವೀನ್, ರಾಜೇಶ್ವರಿ, ಚೆಲುವಮ್ಮ ಹಾಗೂ ಮಾದಮ್ಮ ಮತ್ತಿತರರು ಭಾಗವಹಿಸಿದ್ದರು.

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago