ಮೈಸೂರು: ಹಲವು ತಿಂಗಳಿಂದ ಸವಾರರು,ವಾಹನಗಳಿಗೆ ತ್ರಾಸದಾಯಕವಾಗಿದ್ದ ಮಹದೇಶ್ವರ ರಸ್ತೆ ಡಾಂಬರೀಕರಣಕ್ಕೆ ಮಹಾಪೌರ ಶಿವಕುಮಾರ್ ಗುರುವಾರ ಚಾಲನೆ ನೀಡಿದರು. ಬಸವೇಶ್ವರ ಹಾಗೂ ಮಹದೇಶ್ವರ ದೇವಸ್ಥಾನದ ಮುಂಭಾಗ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಗರಪಾಲಿಕೆ ಸದಸ್ಯರಾದ ಸತ್ಯರಾಜ್, ಛಾಯಾದೇವಿ ಅವರೊಂದಿಗೆ ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ಕೊಟ್ಟರು. ಬಳಿಕ ಮಾತನಾಡಿದ ಮಹಾಪೌರ ಶಿವಕುಮಾರ್, ಒಂದು ವರ್ಷದಿಂದ ಈ ಮಾರ್ಗದ ರಸ್ತೆಯನ್ನು ಡಾಂಬರೀಕರಣ ಮಾಡುವಂತೆ ಸ್ಥಳೀಯ ನಗರಪಾಲಿಕೆ ಸದಸ್ಯರು ಒತ್ತಡ ಹೇರಿದ್ದರು.ಸಾರ್ವಜನಿಕರಿಂದಲೂ ದೂರುಗಳು ಬಂದಿದ್ದವು. ಕಳೆದ ಮೂರು ತಿಂಗಳಹಿಂದೆಯೇ ಕಾಮಗಾರಿ ಆರಂಭಿಸಲು ಕರೆದಿದ್ದ ಟೆಂಡರ್‌ಗೆ ಸಿಂಗಲ್ ವ್ಯಕ್ತಿ ಬಂದಿದ್ದರಿಂದ ಮರು ಟೆಂಡರ್ ಕರೆದಿದ್ದರಿಂದ ವಿಳಂಬವಾಗಿತ್ತು. ಇದೀಗ ೧.೫೦ ಕೋಟಿ ರೂ.ವೆಚ್ಚದಲ್ಲಿ ನಜರ್‌ಬಾದ್ ಪೊಲೀಸ್ ಠಾಣೆಯಿಂದ ಹಳೆಯ ಹಾಲಿನ ಡೈರಿ ತನಕ ರಸ್ತೆಗಳಲ್ಲಿ ಬಿದ್ದಿರುವ ಹಳ್ಳ,ಗುಂಡಿಗಳನ್ನು ಮುಚ್ಚಿ ಡಾಂಬರೀಕರಣ ಮಾಡಲಾಗುತ್ತದೆ ಎಂದರು. ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಮಹದೇಶ್ವರ ರಸ್ತೆಯು ಒಂದಾಗಿರುವ ಕಾರಣ ಎರಡು-ಮೂರು ವರ್ಷಗಳ ಬಾಳಿಕೆ ಬರುವಂತೆ ಕಾಮಗಾರಿ ಮಾಡಲಾಗುತ್ತದೆ. ಎರಡು ಬದಿಯಲ್ಲಿ ನೀರು ನಿಲ್ಲದಂತೆ ನೋಡಿಕೊಂಡು ಡಾಂಬರೀಕರಣ ಮಾಡುತ್ತೇವೆ ಎಂದು ಹೇಳಿದರು.
ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ: ನಗರದ ಸಿದ್ದಾರ್ಥನಗರ, ಡಾ.ರಾಜ್‌ಕುಮಾರ್ ರಸ್ತೆ ಮೊದಲಾದ ಕಡೆಗಳಲ್ಲಿ ನಡೆಯುತ್ತಿರುವ ಟ್ಯಾಂಕ್, ರಸ್ತೆ ಕಾಮಗಾರಿ, ಡ್ರೈನೇಜ್ ಕಾಮಗಾರಿ,ಯುಜಿಡಿ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗಳನ್ನು ಮಹಾಪೌರರು ಪರಿಶೀಲಿಸಿದರು.ಸದಸ್ಯರು,ಅಧಿಕಾರಿಗಳ ತಂಡದೊಂದಿಗೆ ವಿವಿಧ ಕಡೆಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ ಪರಿಶೀಲಿಸಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚಿಸಿದರು. ಉಪ ಮಹಾಪೌರರಾದ ಡಾ.ಜಿ.ರೂಪಾ, ನಗರಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಅಧೀಕ್ಷಕ ಅಭಿಯಂತರ ಮಹೇಶ್,ಕಾರ್ಯಪಾಲಕ ಅಭಿಯಂತರ ರಂಜಿತ್‌ಕುಮಾರ್, ವಾಣಿವಿಲಾಸ ನೀರು ಸರಬರಾಜು ಮಂಡಳಿ ಕಾರ್ಯಪಾಲಕ ಅಭಿಯಂತರರಾದ ಸುವರ್ಣ, ವಲಯ ಕಚೇರಿ ಒಂಬತ್ತರ ಅಭಿವೃದ್ಧಿ ಅಧಿಕಾರಿ ಸಿ.ಹರ್ಷಿಯಾ ಹಾಜರಿದ್ದರು.
ಮೈಸೂರಿನ ನಜರ್‌ಬಾದ್‌ನಿಂದ ಹಾಲಿನ ಡೈರಿಯವರೆಗೆ ರಸ್ತೆ ಡಾಂಬರೀಕರಣಕ್ಕೆ ಮಹಾಪೌರ ಶಿವಕುಮಾರ್ ಗುದ್ದಲಿಪೂಜೆ ನೆರವೇರಿಸಿದರು. ಉಪ ಮಹಾಪೌರರಾದ ಡಾ.ಜಿ.ರೂಪಾ, ಸದಸ್ಯರಾದ ಸತ್ಯರಾಜ್, ಛಾಯಾದೇವಿ,ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಅಭಿವೃದ್ಧಿ ಅಧಿಕಾರಿ ಸಿ.ಹರ್ಷಿಯಾ,ಅಧೀಕ್ಷಕ ಅಭಿಯಂತರ ಮಹೇಶ್,ಕಾರ್ಯಪಾಲಕ ಅಭಿಯಂತರ ರಂಜಿತ್‌ಕುಮಾರ್, ವಾಣಿವಿಲಾಸ ನೀರು ಸರಬರಾಜು ಮಂಡಳಿ ಕಾರ್ಯಪಾಲಕ ಅಭಿಯಂತರರಾದ ಸುವರ್ಣ ಇನ್ನಿತರರು ಹಾಜರಿದ್ದರು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…