ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ಚಾಮುಂಡಿಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು ಎಂದು ಸರ್ವ ಅರ್ಜತೆ ಫೌಂಡೇಷನ್‌ನ ಸಂಸ್ಥಾಪಕರಾದ ಆರ್.ಪದ್ಮ ತಿಳಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಂಸ್ಕೃತಿಕ ನಗರಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಚಾಮುಂಡಿಬೆಟ್ಟಕ್ಕೆ ದಿನೇ ದಿನೇ ದೇಶ ಹಾಗೂ ಹೊರ ದೇಶಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಸಾಮಾನ್ಯ ದಿನಗಳಲ್ಲಿ 2 ಸಾವಿರ, ವಾರಾಂತ್ಯದಲ್ಲಿ 5ರಿಂದ 6 ಸಾವಿರ ಪ್ರವಾಸಿಗರು ಆಗಮಿಸಲಿದ್ದು, ನಮ್ಮ ಸಂಸ್ಕೃತಿಯನ್ನು ಪರಿಚಯಿಸುವ ಸಲುವಾಗಿ ನಿರ್ದಿಷ್ಟವಾದ ‘ಡ್ರೆಸ್ ಕೋಡ್’ ವ್ಯವಸ್ಥೆ ಮಾಡಬೇಕು. ಅದರಲ್ಲಿಯೂ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುವ ಆದೇಶವನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಫೌಂಡೇಷನ್‌ನ ಸುಮಿತ್ರಾ ರಮೇಶ್, ಪಿ.ಪದ್ಮಾ, ನಾಗಭೂಷಣ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.





