Mysore
29
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ವಿದ್ಯುತ್ ಸಂಪರ್ಕ ಕಡಿತಗೊಳಿಸದಂತೆ ಸಚಿವರಿಗೆ ಮನವಿ

ಮೈಸೂರು :  ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಕಚೇರಿಗಳಿಗೆ ಮತ್ತು ಸರ್ಕಾರಿ ಶಾಲಾ ಕಾಲೇಜುಗಳಿಗೆ ವಿದ್ಯುತ್ ಬಿಲ್ ಪಾವತಿಸಲು ಸೂಕ್ತವಾದ ಅನುದಾನ ಲಭ್ಯವಿಲ್ಲದ ಕಾರಣ, ಸಕಾಲದಲ್ಲಿ ವಿದ್ಯುತ್ ಬಿಲ್ ಪಾವತಿಸಿದೆ ಇರುವುದರಿಂದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತಿದ್ದು, ಅದನ್ನು ತಾವುಗಳು ಪರಿಶೀಲಿಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸದಂತೆ ಸಂಬಂಧಪಟ್ಟ ಅಧಿಕಾರಿ ವರ್ಗದವರಿಗೆ ಸೂಚನೆ ನೀಡುವಂತೆ ಮೈಸೂರು ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಇಂಧನ ಸಚಿವ ವಿ.ಸುನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದೆಂದು ಸಂಘದ ಪದಾಧಿಕಾರಿಗಳಿಗೆ ತಿಳಿಸಿದರು.ನರಸಿಂಹ ರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ನೌಕರರ ಸಂಘದ ಅಧ್ಯಕ್ಷಗೋವಿಂದರಾಜು, ಕಾರ್ಯಾಧ್ಯಕ್ಷ ಆನಂದ್, ಕಾರ್ಯದರ್ಶಿ ರೇವಣ್ಣ, ಸಂಘದ ಸದಸ್ಯರಾದ ರಾಜೇಶ್, ಆನಂದ್, ನೂತನ್ ಇನ್ನಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!