ಮೈಸೂರು : ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಕಚೇರಿಗಳಿಗೆ ಮತ್ತು ಸರ್ಕಾರಿ ಶಾಲಾ ಕಾಲೇಜುಗಳಿಗೆ ವಿದ್ಯುತ್ ಬಿಲ್ ಪಾವತಿಸಲು ಸೂಕ್ತವಾದ ಅನುದಾನ ಲಭ್ಯವಿಲ್ಲದ ಕಾರಣ, ಸಕಾಲದಲ್ಲಿ ವಿದ್ಯುತ್ ಬಿಲ್ ಪಾವತಿಸಿದೆ ಇರುವುದರಿಂದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತಿದ್ದು, ಅದನ್ನು ತಾವುಗಳು ಪರಿಶೀಲಿಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸದಂತೆ ಸಂಬಂಧಪಟ್ಟ ಅಧಿಕಾರಿ ವರ್ಗದವರಿಗೆ ಸೂಚನೆ ನೀಡುವಂತೆ ಮೈಸೂರು ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಇಂಧನ ಸಚಿವ ವಿ.ಸುನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದೆಂದು ಸಂಘದ ಪದಾಧಿಕಾರಿಗಳಿಗೆ ತಿಳಿಸಿದರು.ನರಸಿಂಹ ರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ನೌಕರರ ಸಂಘದ ಅಧ್ಯಕ್ಷಗೋವಿಂದರಾಜು, ಕಾರ್ಯಾಧ್ಯಕ್ಷ ಆನಂದ್, ಕಾರ್ಯದರ್ಶಿ ರೇವಣ್ಣ, ಸಂಘದ ಸದಸ್ಯರಾದ ರಾಜೇಶ್, ಆನಂದ್, ನೂತನ್ ಇನ್ನಿತರರು ಹಾಜರಿದ್ದರು.
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…
ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…
ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…