Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಮೀಸಲಾತಿ ಹೆಚ್ಚಿಸಲು ಕಾಂಗ್ರೆಸ್ ಗೆ ಇಚ್ಛಾಶಕ್ತಿ ಇರಲಿಲ್ಲ : ಬಿ.ಶ್ರೀರಾಮುಲು

ಚಾಮರಾಜನಗರ: ಕಾಂಗ್ರೆಸ್‌ಗೆ ಮೀಸಲಾತಿ ಹೆಚ್ಚಳ ಮಾಡಲು ಇಚ್ಛಾಶಕ್ತಿ ಇರಲಿಲ್ಲ. ಬಿಜೆಪಿಗೆ ಇಚ್ಚಾಶಕ್ತಿ ಇದ್ದುದರಿಂದ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ
ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ರಾಹುಲ್‌ ಗಾಂಧಿ ಅವರ ಜೋಡೋ ಯಾತ್ರೆ ಸಂದರ್ಭದಲ್ಲಿ ಗೊಲ್ಲರು ಹಾಗೂ ಕಾಡುಗೊಲ್ಲ ಸಮುದಾಯಕ್ಕೆ ಅವಮಾನ ಮಾಡಿದ್ದು
ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಹಿಂದುಳಿದ ಜಾತಿಗಳನ್ನು ಮತಬ್ಯಾಂಕ್‌ ಮಾಡಿಕೊಂಡಿರುವ ಸಿದ್ದರಾಮಯ್ಯ ,ಮೀಸಲಾತಿ ಹೆಚ್ಚಿಸಲು ಪ್ರೋತ್ಸಾಹ ಕೊಟ್ಟಿದ್ದೇವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದರು. ದೇವೇಗೌಡ ,ಪರಮೇಶ್ವರ್‌
ಅವರ ನಂತರ ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸಲು ಹೊರಟಿರುವ ಸಿದ್ದರಾಮಯ್ಯ ಅಹಿಂದ ಮುಖವಾಡ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಬೇರೆಯವರು ಕಟ್ಟಿದ ಗೂಡಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!