ಚಾಮರಾಜನಗರ: ಕಾಂಗ್ರೆಸ್‌ಗೆ ಮೀಸಲಾತಿ ಹೆಚ್ಚಳ ಮಾಡಲು ಇಚ್ಛಾಶಕ್ತಿ ಇರಲಿಲ್ಲ. ಬಿಜೆಪಿಗೆ ಇಚ್ಚಾಶಕ್ತಿ ಇದ್ದುದರಿಂದ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ
ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ರಾಹುಲ್ ಗಾಂಧಿ ಅವರ ಜೋಡೋ ಯಾತ್ರೆ ಸಂದರ್ಭದಲ್ಲಿ ಗೊಲ್ಲರು ಹಾಗೂ ಕಾಡುಗೊಲ್ಲ ಸಮುದಾಯಕ್ಕೆ ಅವಮಾನ ಮಾಡಿದ್ದು
ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಹಿಂದುಳಿದ ಜಾತಿಗಳನ್ನು ಮತಬ್ಯಾಂಕ್ ಮಾಡಿಕೊಂಡಿರುವ ಸಿದ್ದರಾಮಯ್ಯ ,ಮೀಸಲಾತಿ ಹೆಚ್ಚಿಸಲು ಪ್ರೋತ್ಸಾಹ ಕೊಟ್ಟಿದ್ದೇವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದರು. ದೇವೇಗೌಡ ,ಪರಮೇಶ್ವರ್
ಅವರ ನಂತರ ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸಲು ಹೊರಟಿರುವ ಸಿದ್ದರಾಮಯ್ಯ ಅಹಿಂದ ಮುಖವಾಡ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಬೇರೆಯವರು ಕಟ್ಟಿದ ಗೂಡಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…