ಹನೂರು : ತಿರುಗಾಡುವ ರಸ್ತೆಯನ್ನೇ ಕೆಲವರು ಒತ್ತುವರಿ ಮಾಡಿಕೊಂಡಿದ್ದು, ರಸ್ತೆ ಬಿಡಿಸಿಕೊಡುವಂತೆ ಸಾಕಷ್ಟು ಬಾರಿ ಸಂಬಂಧ ಪಟ್ಟ ಅಧಿಕಾರಿಗಳ ಬಳಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾಂಚಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ.
ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಾoಚಳ್ಳಿ ಗ್ರಾಮದಲ್ಲಿ ರಸ್ತೆ ಒತ್ತುವರಿ ಮಾಡಿಕೊಂಡಿದ್ದು ಸುಮಾರು ಹತ್ತಕ್ಕೂ ಹೆಚ್ಚು ಮನೆಗಳಿಗೆ ತಿರುಗಾಡಲು ರಸ್ತೆಯೇ ಇಲ್ಲದಂತಾಗಿದೆ.
ಕಿರಿದಾದ ರಸ್ತೆ : ಕೆಲವೊಂದು ಮನೆಗಳಿಗೆ ತೀರಾ ಕಿರಿದಾದ ರಸ್ತೆ ಇದ್ದು ದ್ವಿ ಚಕ್ರ ವಾಹನ ಮಾತ್ರ ಸಂಚರಿಸಲು ಅವಕಾಶವಿದ್ದು ಉಳಿದಂತೆ ತುಂಬಾ ತೊಂದರೆಯಾಗಿದೆ .ಅಲ್ಲದೆ ಮಳೆಗಾಲದಲ್ಲಂತು ಇವರ ಕಷ್ಟ ಹೇಳತೀರದಾಗಿದೆ. ಹಾಗಾಗಿ ಒತ್ತುವರಿಯಾಗಿರುವ ರಸ್ತೆಯನ್ನು ಸಂಬಂಧ ಪಟ್ಟ ಅಧಿಕಾರಿಗಳು ಜನಪ್ರತಿನಿದಿಗಳು ಪರಿಶೀಲನೆ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸಾಕಷ್ಟು ಬಾರಿ ಮನವಿ ಸಲ್ಲಿಸಿರುವ ಗ್ರಾಮಸ್ಥರು : ಈ ವಿಚಾರವಾಗಿ ಸಾಕಷ್ಟು ಬಾರಿ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿದಿನಗಳಿಗೆ ಮನವಿಯನ್ನು ಲಿಖಿತವಾಗಿಯೇ ಸಲ್ಲಿಸಿದ್ದರೂ ಸಹ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ. ಅಲ್ಲದೆ ಸರ್ಕಾರಿ ನೀತಿ ನಿಯಮಗಳ ಪ್ರಕಾರ ಒತ್ತುವರಿಯಾಗಿರುವುದನ್ನು ಸರಿಪಡಿಸಲು ಯಾಕೆ ಹಿಂದೇಟು ಹಾಕುತ್ತಿದ್ದಾರೆ ಅಧಿಕಾರಿಗಳು ಎಂಬುದು ಯಕ್ಷ ಪ್ರಶ್ನೆಯಾಗಿದೆ.
ಲಿಖಿತ ಮನವಿ ಕೊಟ್ಟು ಸಾಕಷ್ಟು ತಿಂಗಳೇ ಕಳೆದಿದ್ದರು ಇತ್ತ ಗಮನಹರಿಸದೆ ಇರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಇನ್ನು ಮುಂದಾದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಒತ್ತುವರಿದಾರರಿಗೆ ದಾಖಲಾತಿ ಒದಗಿಸುವಂತೆ ನೋಟಿಸ್ ನೀಡಲಾಗಿದೆ .ಆದರೆ ಇದುವರೆಗೂ ದಾಖಲೆಗಳನ್ನು ನೀಡಿಲ್ಲ. ಸಿಸಿರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡಲು ಕ್ರಿಯೆ ಯೋಜನೆ ರೂಪಿಸಿ ಅನುಮೋದನೆ ಪಡೆಯಲಾಗಿದೆ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಒತ್ತುವರಿ ತೆರವುಗೊಳಿಸಿ ರಸ್ತೆ ಕಾಮಗಾರಿ ಮಾಡಲಾಗುವುದು.
ಸುರೇಶ್ ಪಿಡಿಒ ಸೂಳೇರಿಪಾಳ್ಯ
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…