ಜಿಲ್ಲೆಗಳು

ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

ಹನೂರು : ತಿರುಗಾಡುವ ರಸ್ತೆಯನ್ನೇ ಕೆಲವರು ಒತ್ತುವರಿ ಮಾಡಿಕೊಂಡಿದ್ದು, ರಸ್ತೆ ಬಿಡಿಸಿಕೊಡುವಂತೆ ಸಾಕಷ್ಟು ಬಾರಿ ಸಂಬಂಧ ಪಟ್ಟ ಅಧಿಕಾರಿಗಳ ಬಳಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾಂಚಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ.

ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಾoಚಳ್ಳಿ ಗ್ರಾಮದಲ್ಲಿ ರಸ್ತೆ ಒತ್ತುವರಿ ಮಾಡಿಕೊಂಡಿದ್ದು ಸುಮಾರು ಹತ್ತಕ್ಕೂ ಹೆಚ್ಚು ಮನೆಗಳಿಗೆ ತಿರುಗಾಡಲು ರಸ್ತೆಯೇ ಇಲ್ಲದಂತಾಗಿದೆ.

ಕಿರಿದಾದ ರಸ್ತೆ : ಕೆಲವೊಂದು ಮನೆಗಳಿಗೆ ತೀರಾ ಕಿರಿದಾದ ರಸ್ತೆ ಇದ್ದು ದ್ವಿ ಚಕ್ರ ವಾಹನ ಮಾತ್ರ ಸಂಚರಿಸಲು ಅವಕಾಶವಿದ್ದು ಉಳಿದಂತೆ ತುಂಬಾ ತೊಂದರೆಯಾಗಿದೆ .ಅಲ್ಲದೆ ಮಳೆಗಾಲದಲ್ಲಂತು ಇವರ ಕಷ್ಟ ಹೇಳತೀರದಾಗಿದೆ. ಹಾಗಾಗಿ ಒತ್ತುವರಿಯಾಗಿರುವ ರಸ್ತೆಯನ್ನು ಸಂಬಂಧ ಪಟ್ಟ ಅಧಿಕಾರಿಗಳು ಜನಪ್ರತಿನಿದಿಗಳು ಪರಿಶೀಲನೆ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸಾಕಷ್ಟು ಬಾರಿ ಮನವಿ ಸಲ್ಲಿಸಿರುವ ಗ್ರಾಮಸ್ಥರು : ಈ ವಿಚಾರವಾಗಿ ಸಾಕಷ್ಟು ಬಾರಿ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿದಿನಗಳಿಗೆ ಮನವಿಯನ್ನು ಲಿಖಿತವಾಗಿಯೇ ಸಲ್ಲಿಸಿದ್ದರೂ ಸಹ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ. ಅಲ್ಲದೆ ಸರ್ಕಾರಿ ನೀತಿ ನಿಯಮಗಳ ಪ್ರಕಾರ ಒತ್ತುವರಿಯಾಗಿರುವುದನ್ನು   ಸರಿಪಡಿಸಲು ಯಾಕೆ ಹಿಂದೇಟು ಹಾಕುತ್ತಿದ್ದಾರೆ ಅಧಿಕಾರಿಗಳು ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಲಿಖಿತ ಮನವಿ ಕೊಟ್ಟು ಸಾಕಷ್ಟು ತಿಂಗಳೇ ಕಳೆದಿದ್ದರು ಇತ್ತ ಗಮನಹರಿಸದೆ ಇರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಇನ್ನು ಮುಂದಾದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಒತ್ತುವರಿದಾರರಿಗೆ ದಾಖಲಾತಿ ಒದಗಿಸುವಂತೆ ನೋಟಿಸ್ ನೀಡಲಾಗಿದೆ .ಆದರೆ ಇದುವರೆಗೂ ದಾಖಲೆಗಳನ್ನು ನೀಡಿಲ್ಲ. ಸಿಸಿರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡಲು ಕ್ರಿಯೆ ಯೋಜನೆ ರೂಪಿಸಿ ಅನುಮೋದನೆ ಪಡೆಯಲಾಗಿದೆ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಒತ್ತುವರಿ ತೆರವುಗೊಳಿಸಿ ರಸ್ತೆ ಕಾಮಗಾರಿ ಮಾಡಲಾಗುವುದು.

ಸುರೇಶ್ ಪಿಡಿಒ ಸೂಳೇರಿಪಾಳ್ಯ

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

8 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

9 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

10 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

15 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

22 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

22 hours ago