ಮೈಸೂರು : ನಗರದ ಮಧ್ವಾಚಾರ್ಯ ರಸ್ತೆ ಬಳಿ ಗಾಡಿ ಚೌಕ ಗುಂಡಿಗಳ ಮಧ್ಯೆ ದೀಪಗಳನ್ನು ಬೆಳಗಿಸುವ ಮೂಲಕ ಕೃಷ್ಣರಾಜ ಯುವ ಬಳಗದ ವತಿಯಿಂದ ದೀಪಾವಳಿಯನ್ನು ಆಚರಿಸಲಾಯಿತು.
ನಗರದಲ್ಲಿ ಹಲವಾರು ರಸ್ತೆಗಳು ಗುಂಡಿಮಯವಾಗಿರುವ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ರಸ್ತೆ ಸರಿಪಡಿಸಲು ವಿಶೇಷವಾಗಿ ಗುಂಡಿಗಳ ಸುತ್ತ ದೀಪಗಳನ್ನು ಬೆಳಗಿಸುವ ಮೂಲಕ ಮೈಸೂರು ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನ ಸೆಳೆಯಲು ಮಹಾನಗರ ಪಾಲಿಕೆ ವಿರುದ್ಧ ಅಣಕು ಪ್ರದರ್ಶನ ಮಾಡುವ ಮೂಲಕ ಈ ಕೂಡಲೇ ಮೈಸೂರು ನಗರದ ಎಲ್ಲಾ ಗುಂಡಿಗಳನ್ನು ಮುಚ್ಚುವ ಕಾರ್ಯ ಮುಂದಾಗಬೇಕು ಎಂದು ಒತ್ತಾಯಿಸಿದರು.
ದಸರೆಯೊಳಗೆ ಎಲ್ಲ ರಸ್ತೆಗಳನ್ನು ದುರಸ್ತಿಗೊಳಿಸಲಾಗುವುದು ಎಂದು ಉಸ್ತುವಾರಿ ಸಚಿವರು ಹಾಗೂ ಮಹಾಪೌರರು ಭರವಸೆ ನೀಡಿದರು ಆದರೆ ದಸರಾ ಮುಗಿದು 20ದಿನಗಳಾದರೂ ರಸ್ತೆ ದುರಸ್ತಿಗೊಳಿಸುತ್ತಿಲ್ಲವೇಕೆ ? ಎಂದು ಕಾಂಗ್ರೆಸ್ ಮುಖಂಡ ಪ್ರದೀಪ್ ಕುಮಾರ್ ಪ್ರಶ್ನಿಸಿದ್ದಾರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಖಂಡನೀಯವಾದುದು. ಜನರಿಗೆ ಮೂಲ ಸೌಲಭ್ಯವನ್ನು ಕಲ್ಪಿಸದ್ದಿದ್ದರೆ ಇನ್ನೇನು ಮಾಡುವವರು ಎಂಬ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪ್ರಮುಖ ರಸ್ತೆಗಳು ಸೇರಿದಂತೆ ಸುತ್ತಮುತ್ತಲಿನ ರಸ್ತೆಗಳು ಹಾಳಾಗಿ ಅಪಘಾತ ಹೆಚ್ಚು ಅನಾಹುತಗಳಿಗೆ ಗುಂಡಿಗಳೇ ಆಹ್ವಾನ ನೀಡುತ್ತಿದೆ, ಈ ಕುರಿತು ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳಲ್ಲಿ ವರದಿಯಾಗಿದೆ. ವಾಹನಗಳು ಗುಂಡಿಗಳಲ್ಲಿ ಓಡಾಡಲು ತಪ್ಪಿಸಲು ಹೋಗಿ 28 ಜನ ವಾಹನ ಸವಾರರು ಪ್ರಾಣ ಕಳೆದುಕೊಂಡಿದ್ದಾರೆ. ಮೈಸೂರಿನಲ್ಲೂ ಸಹ ಹಲವಾರು ಅಪಘಾತಗಳು ಆಗಿದೆ ಇಂತಹ ಘಟನೆಗಳು ಮರುಕಳಿಸಬಾರದು. ಮರು ಕಲ್ಪಿಸಿದರೆ ಇದಕ್ಕೆ ಪೂರ್ಣ ನಗರಪಾಲಿಕೆ ಅಧಿಕಾರಿಗಳೇ ನೇರವಾಗಿ ಹೊಣೆಯಾಗುತ್ತಾರೆ. ಇದರ ಬದಲಾಗಿ ಇವರು ಗುಣಮಟ್ಟದ ರಸ್ತೆಗಳನ್ನು ಮಾಡಲು ಮುಂದಾಗಬೇಕು ,ಈ ಕೂಡಲೇ ಮೈಸೂರು ನಗರದಲ್ಲಿರುವ ಎಲ್ಲಾ ಗುಂಡಿಗಳನ್ನು ಗುಣಮಟ್ಟವಾಗಿ ಮುಚ್ಚಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಪ್ರದೀಪ್ ಕುಮಾರ್ ,ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ,ಅಹಿಂದ ನಟರಾಜ್ ,ಕೃಷ್ಣರಾಜ ಯುವಬಳಗದ ಅಧ್ಯಕ್ಷ ನವೀನ್ ಕೆಂಪಿ ,ಎಸ್ ಎನ್ ರಾಜೇಶ್ ,ತೀರ್ಥಕುಮಾರ್ ,ಹಾಗೂ ಇನ್ನಿತರರು ಹಾಜರಿದ್ದರು
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…