ಜಿಲ್ಲೆಗಳು

ರಸ್ತೆ ಗುಂಡಿಗಳ ಸುತ್ತ ದೀಪ ಬೆಳಗಿಸಿ ಹಬ್ಬ ಆಚರಣೆ

ಮೈಸೂರು : ನಗರದ ಮಧ್ವಾಚಾರ್ಯ ರಸ್ತೆ ಬಳಿ ಗಾಡಿ ಚೌಕ ಗುಂಡಿಗಳ ಮಧ್ಯೆ ದೀಪಗಳನ್ನು ಬೆಳಗಿಸುವ ಮೂಲಕ ಕೃಷ್ಣರಾಜ ಯುವ ಬಳಗದ ವತಿಯಿಂದ ದೀಪಾವಳಿಯನ್ನು ಆಚರಿಸಲಾಯಿತು.

ನಗರದಲ್ಲಿ ಹಲವಾರು ರಸ್ತೆಗಳು ಗುಂಡಿಮಯವಾಗಿರುವ  ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ರಸ್ತೆ ಸರಿಪಡಿಸಲು ವಿಶೇಷವಾಗಿ ಗುಂಡಿಗಳ ಸುತ್ತ ದೀಪಗಳನ್ನು ಬೆಳಗಿಸುವ ಮೂಲಕ ಮೈಸೂರು ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನ ಸೆಳೆಯಲು ಮಹಾನಗರ ಪಾಲಿಕೆ ವಿರುದ್ಧ ಅಣಕು ಪ್ರದರ್ಶನ ಮಾಡುವ ಮೂಲಕ ಈ ಕೂಡಲೇ ಮೈಸೂರು ನಗರದ ಎಲ್ಲಾ ಗುಂಡಿಗಳನ್ನು ಮುಚ್ಚುವ ಕಾರ್ಯ ಮುಂದಾಗಬೇಕು ಎಂದು ಒತ್ತಾಯಿಸಿದರು.

ದಸರೆಯೊಳಗೆ ಎಲ್ಲ ರಸ್ತೆಗಳನ್ನು ದುರಸ್ತಿಗೊಳಿಸಲಾಗುವುದು ಎಂದು ಉಸ್ತುವಾರಿ ಸಚಿವರು ಹಾಗೂ ಮಹಾಪೌರರು ಭರವಸೆ ನೀಡಿದರು ಆದರೆ ದಸರಾ ಮುಗಿದು 20ದಿನಗಳಾದರೂ ರಸ್ತೆ ದುರಸ್ತಿಗೊಳಿಸುತ್ತಿಲ್ಲವೇಕೆ ? ಎಂದು ಕಾಂಗ್ರೆಸ್ ಮುಖಂಡ ಪ್ರದೀಪ್ ಕುಮಾರ್ ಪ್ರಶ್ನಿಸಿದ್ದಾರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಖಂಡನೀಯವಾದುದು. ಜನರಿಗೆ ಮೂಲ ಸೌಲಭ್ಯವನ್ನು ಕಲ್ಪಿಸದ್ದಿದ್ದರೆ ಇನ್ನೇನು ಮಾಡುವವರು ಎಂಬ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರಮುಖ ರಸ್ತೆಗಳು ಸೇರಿದಂತೆ ಸುತ್ತಮುತ್ತಲಿನ ರಸ್ತೆಗಳು ಹಾಳಾಗಿ ಅಪಘಾತ ಹೆಚ್ಚು ಅನಾಹುತಗಳಿಗೆ ಗುಂಡಿಗಳೇ ಆಹ್ವಾನ ನೀಡುತ್ತಿದೆ, ಈ ಕುರಿತು ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳಲ್ಲಿ ವರದಿಯಾಗಿದೆ. ವಾಹನಗಳು ಗುಂಡಿಗಳಲ್ಲಿ ಓಡಾಡಲು ತಪ್ಪಿಸಲು ಹೋಗಿ 28 ಜನ ವಾಹನ ಸವಾರರು ಪ್ರಾಣ ಕಳೆದುಕೊಂಡಿದ್ದಾರೆ. ಮೈಸೂರಿನಲ್ಲೂ ಸಹ ಹಲವಾರು ಅಪಘಾತಗಳು ಆಗಿದೆ ಇಂತಹ ಘಟನೆಗಳು ಮರುಕಳಿಸಬಾರದು. ಮರು ಕಲ್ಪಿಸಿದರೆ ಇದಕ್ಕೆ ಪೂರ್ಣ ನಗರಪಾಲಿಕೆ ಅಧಿಕಾರಿಗಳೇ ನೇರವಾಗಿ ಹೊಣೆಯಾಗುತ್ತಾರೆ. ಇದರ ಬದಲಾಗಿ ಇವರು ಗುಣಮಟ್ಟದ  ರಸ್ತೆಗಳನ್ನು ಮಾಡಲು ಮುಂದಾಗಬೇಕು ,ಈ ಕೂಡಲೇ ಮೈಸೂರು ನಗರದಲ್ಲಿರುವ ಎಲ್ಲಾ ಗುಂಡಿಗಳನ್ನು ಗುಣಮಟ್ಟವಾಗಿ ಮುಚ್ಚಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಪ್ರದೀಪ್ ಕುಮಾರ್ ,ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ,ಅಹಿಂದ ನಟರಾಜ್ ,ಕೃಷ್ಣರಾಜ ಯುವಬಳಗದ ಅಧ್ಯಕ್ಷ ನವೀನ್ ಕೆಂಪಿ ,ಎಸ್ ಎನ್ ರಾಜೇಶ್ ,ತೀರ್ಥಕುಮಾರ್ ,ಹಾಗೂ ಇನ್ನಿತರರು ಹಾಜರಿದ್ದರು

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago