ಹನೂರು: ತಾಲೂಕಿನ ನಾಗನತ್ತ ಗ್ರಾಮದ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್. ನರೇಂದ್ರ ಸೋಮವಾರ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ಇಲಾಖೆಯ ಎಂ. ಡಿ. ಆರ್. ಯೋಜನೆಯಡಿ ಕಳೆದ 3 ವರ್ಷಗಳ ಹಿಂದೆಯೇ ಈ ಕಾಮಗಾರಿಯನ್ನು ಕೈಗೊಳ್ಳುವ ಸಂಬಂಧ ಅನುದಾನವನ್ನು ಬಿಡುಗಡೆ ಮಾಡಲಾಗಿತ್ತು. ಕಾರಣಾಂತರಗಳಿಂದ ಕಾಮಗಾರಿ ಆರಂಭಗೊಳ್ಳದೆ ಅನುದಾನ ವಾಪಸ್ ಹೋಗಿತ್ತು. ತರುವಾಯ ಈ ಬಗ್ಗೆ ಪುನಃ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುದಾನ ದೊರೆತು ಕಾಮಗಾರಿ ಪ್ರಾರಂಭಿಸಲಾಗುತ್ತಿದೆ. ಈ ರಸ್ತೆ ದುರಸ್ತಿ ಯಾಗಿರುವ ಬಗ್ಗೆ ಗ್ರಾಮಸ್ಥರು ಹಲವಾರು ಬಾರಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆ ಕ್ರಮ ಕೈಗೊಂಡು ಕಾಮಗಾರಿ ಪ್ರಾರಂಭಿಸಲಾಗಿದೆ . ಗುತ್ತಿಗೆದಾರರು ಗ್ರಾಮಸ್ಥರ ಸಹಕಾರದೊಂದಿಗೆ ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಿ ಎಂದರು.
ಈ ಸಂದರ್ಭದಲ್ಲಿ ಎಇಇ ರಾಜೇಶ್ ಮುನಸಿ,ಕಿರಿಯ ಅಭಿಯಂತರರಾದ ಚಿನ್ನಣ್ಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಉಪಾಧ್ಯಕ್ಷ ಶಂಕ್ರಪ್ಪ,ಮುಖಂಡರಾದ ಶಂಭು,ಗುತ್ತಿಗೆದಾರ ಅಪ್ಪಾದೊರೆ, ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಮುಖಂಡರುಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು…
ರಾಮನಗರ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಮತ್ತು ಅದರ ನಿರೂಪಕ ನಟ ಕಿಚ್ಚ ಸುದೀಪ್ ವಿರುದ್ಧ…
ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ…
ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…
ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…
ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…