ಜಿಲ್ಲೆಗಳು

ಪಟ್ಟಣದಲ್ಲಿ ರಸ್ತೆ ಅಗಲೀಕರಣ ಕಾರ್ಯಾಚರಣೆ ಚುರುಕು

ಹನೂರು: ಕಳೆದ 2 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟಣದ ರಸ್ತೆ ಅಗಲೀಕರಣ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರ ಸೂಚನೆ ಮೇರೆಗೆ ಶನಿವಾರ ಕೊಳ್ಳೆಗಾಲ ಉಪವಿಭಾಗಾಧಿಕಾರಿ ಗೀತಾ ಹುಡೇದ್ ನೇತೃತ್ವದಲ್ಲಿ ಚುರುಕುಗೊಂಡಿದೆ.

ಕೊಳ್ಳೇಗಾಲದಿಂದ ಹನೂರು ಪಟ್ಟಣದ ವರೆಗೆ 23ಕಿ ಮೀ ರಸ್ತೆಯನ್ನು 108ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿರವರು ಕಾಮಗಾರಿಗೆ ಚಾಲನೆ ನೀಡಿದ್ದರು. ಚಾಲನೆ ನೀಡಿ 5ವರ್ಷಗಳೇ ಕಳೆದಿದ್ದರೂ ಸಹ ಕಾಮಗಾರಿ ಪೂರ್ಣಗೊಂಡಿರಲಿಲ್ಲ ಇದು ಸಾರ್ವಜನಿಕ ವಲಯದಲ್ಲಿ ತೀವ್ರ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಜಿಲ್ಲಾ ಉಸ್ತುವಾರಿ ಸಚಿವರ ಒತ್ತು: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿ ಸೋಮಣ್ಣ ನೇಮಕಗೊಂಡ ನಂತರ ಕೊಳ್ಳೇಗಾಲದಿಂದ ಹನೂರು ಪಟ್ಟಣದ ವರೆಗಿನ ರಸ್ತೆ ಅಭಿವೃದ್ಧಿ ಬಗ್ಗೆ ಸಂಬಂಧಪಟ್ಟ ಕೆಶಿಪ್ ಅಧಿಕಾರಿಗಳ ಜೊತೆ ಹತ್ತಾರು ಸಭೆ ನಡೆಸಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆ ರಸ್ತೆ ಅಭಿವೃದ್ಧಿ ಕಾಮಗಾರಿ ಚುರುಕುಗೊಂಡಿದೆ .

ಇದಲ್ಲದೆ ಕಳೆದ 3ದಿನಗಳ ಹಿಂದೆ ಅಪಾರ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಮಾಲೀಕರುಗಳ ಜತೆ ಸಭೆ ನಡೆಸಿ ಮಳಿಗೆಗಳನ್ನು ತೆರವು ಗೊಳಿಸುವಂತೆ ಸೂಚಿಸಿದ್ದರು. ಇಷ್ಟಾದರೂ ಸಹ ಮಳಿಗೆದಾರರು ಕ್ಯಾರೆ ಎಂದಿಲ್ಲ ಶನಿವಾರ ಉಪವಿಭಾಗಾಧಿಕಾರಿ ಗೀತಾ ಹಾಗೂ ಕೆಶಿಪ್ ಅಧಿಕಾರಿಗಳ ನೇತೃತ್ವದ ತಂಡ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಪಟ್ಟಣ ಪಂಚಾಯಿತಿಗೆ ಸೇರಿದ ಅಂಗಡಿ ಮಳಿಗೆಗಳನ್ನು ತೆರವುಗೊಳಿಸಿದ್ದಾರೆ.

ಮಳಿಗೆ ಪಡೆದವರ ಅಳಲು : ಪಟ್ಟಣ ಪಂಚಾಯಿತಿಗೆ ಸೇರಿದ ವಾಣಿಜ್ಯ ಮಳಿಗೆಯನ್ನು ನಾವು ಇಪ್ಪತ್ತೈದು ವರ್ಷಕ್ಕೆ ಗುತ್ತಿಗೆ ಪಡೆದಿದ್ದವು ಆದರೆ ಇನ್ನೂ ಕಾಲಾವಕಾಶ ಇರುವಾಗಲೇ ಅಧಿಕಾರಿಗಳು ಖಾಲಿ ಮಾಡುವಂತೆ ತಿಳಿಸಿದ್ದಾರೆ ನಮಗೆ ಬಾಕಿ ಬರಬೇಕಾಗಿರುವ ಹಣವನ್ನು ಪಾವತಿಸಿ ನಂತರ ತೆರವುಗೊಳಿಸುವಂತೆ ಮಳಿಗೆ ಪಡೆದವರುಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

andolanait

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

1 hour ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

4 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

5 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

5 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

6 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

6 hours ago