Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ : ವಾಹನ ಸವಾರರ ಪರದಾಟ

ಹನೂರು:ತಾಲ್ಲೂಕಿನ ಲೊಕ್ಕನಹಳ್ಳಿ ಯಿಂದ ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ವಾಹನ ಸವಾರರು ಸುಮಾರು 2 ಗಂಟೆಗಳ ಹೆಚ್ಚು ಕಾಲ ಪರದಾಡುವಂತಾಗಿತ್ತು.

ಲೊಕ್ಕನಹಳ್ಳಿ ಗ್ರಾಮದ ಸಮೀಪ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದ ಪರಿಣಾಮ ದ್ವಿಚಕ್ರ ವಾಹನಗಳು ಸೇರಿದಂತೆ ಬಸ್, ಟೆಂಪೋ,ತರಕಾರಿ ವಾಹನಗಳು ತೆರಳಲು ಸಾಧ್ಯವಾಗದೆ ರಸ್ತೆಯಲ್ಲೇ ಕಾಲ ಕಳೆಯುವಂತಾಗಿತ್ತು.

ಮರವು ರಸ್ತೆಗೆ ಸುಮಾರು 4 ಗಂಟೆ ಸಮಯದಲ್ಲಿ ಬಿದ್ದಿದೆ. ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ ಒಂದೂವರೆ ಗಂಟೆ ತಡವಾಗಿ ಆಗಮಿಸಿದ್ದಾರೆ. ನಂತರ ಸ್ಥಳೀಯರ ನೆರವಿನಿಂದ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಒಣ ಮರ ತೆರವುಗೊಳಿಸುವಂತೆ ಆಗ್ರಹ : ಹನೂರು ಪಟ್ಟಣದಿಂದ ಲೊಕ್ಕನಹಳ್ಳಿ ಗ್ರಾಮಕ್ಕೆ ತೆರಳುವ ಮಾರ್ಗಮಧ್ಯದಲ್ಲೇ ಇಪ್ಪತ್ತಕ್ಕೂ ಹೆಚ್ಚು ಮರಗಳು ಒಣಗಿ ನಿಂತಿದೆ.ಇದಲ್ಲದೆ ಮಸ್ಕತಿ ಹಳ್ಳದ ಸಮೀಪವು 1ಬೃಹತ್ ಗಾತ್ರದ ಮರ ಒಣಗಿ ನಿಂತಿರುವುದರಿಂದ ಯಾವ ಸಮಯದಲ್ಲಾದರೂ ಮರ ಬೀಳಬಹುದು. ಅನಾಹುತ ಅವಘಡಗಳು ಸಂಭವಿಸುವ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಒಣ ಮರ ತೆರವುಗೊಳಿಸುವಂತೆ ಪರಿವರ್ತನಾ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ .

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ