ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 9 ಪ್ರಕರಣ ದಾಖಲು
ಮೈಸೂರು: ನಗರ ಪೊಲೀಸರು ರೌಡಿಶೀಟರ್ ಒಬ್ಬನನ್ನು ೬ ತಿಂಗಳುಗಳ ಕಾಲ ಗಡಿಪಾರು ಮಾಡಿದ್ದಾರೆ. ಗೌಸಿಯಾನಗರದ ಕೇರಳ ಮಸೀದಿ ರಸ್ತೆಯ ೨ನೇ ಕ್ರಾಸ್‌ನ ಅಕ್ಮಲ್ ಪಾಷ ಅಲಿಯಾಸ್ ಪೋಕ್ಲೈನ್ (೩೪) ಎಂಬಾತನೇ ಮುಂದಿನ ಆರು ತಿಂಗಳವರೆಗೆ ಗಡಿಪಾರು ಆದ ರೌಡಿ.
ಈತನ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು, ಉದಯಗಿರಿ, ದೇವರಾಜ, ಲಷ್ಕರ್ ಪೊಲೀಸ್ ಠಾಣೆಯಲ್ಲಿ ಒಟ್ಟು ೯ ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ. ಒಂದು ಪ್ರಕರಣದಲ್ಲಿ ಶಿಕ್ಷೆಯೂ ಆಗಿದೆ. ಇನ್ನು ಕೆಲವು ಪ್ರಕರಣಗಳು ತನಿಖೆಯಲ್ಲಿವೆ.
ಈತನ ವಿರುದ್ಧ ರೌಡಿ ಶೀಟ್ ತೆರೆದು ತೀವ್ರ ನಿಗಾದಲ್ಲಿ ಇಟ್ಟಿದ್ದಾಗಿಯೂ ಈತನು ಪೊಲೀಸರ ಕಣ್ಣು ತಪ್ಪಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಚಟುವಟಿಕೆಯಲ್ಲಿ ತೊಡಗಿದ್ದ. ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ರಾಬರಿ, ಮಹಿಳೆ ಮಾನಭಂಗ, ನಿಂದನೆಗಳಂತ ಅಪರಾಧ ಕೃತ್ಯಗಳಲ್ಲಿ ಭಗಿಯಾಗಿದ್ದು, ಈ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದ. ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಪಡೆದು ಕಾರಾಗೃಹದಿಂದ ಬಿಡುಗಡೆಯಾದ ನಂತರವೂ ತನ್ನ ಸಹಚರರನ್ನು ಒಗ್ಗೂಡಿಸಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಲು ಪ್ರಯತ್ನಿಸಿದ್ದ.
ತನ್ನ ವಿರುದ್ಧ ಸಾಕ್ಷಿ ನುಡಿಯದಂತೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವುದು, ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ರೀತಿಯಲ್ಲಿ ವರ್ತಿಸಿ, ಸಮಾಜಘಾತುಕ ಶಕ್ತಿಯಾಗಿ ಗೂಂಡಾವರ್ತನೆಯನ್ನು ಪ್ರದರ್ಶಿಸುವ ಪ್ರವೃತ್ತಿಯನ್ನು ಬೆಳೆಸಿಕೊಂಡು ಸಾರ್ವಜನಿಕರ ಆಸ್ತಿ ಮತ್ತು ಜೀವ ಹಾನಿ ಮಾಡುವ ಸಂಭವ ಇದೆ ಎಂದು ತಿಳಿದುಬಂದಿದ್ದರಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈತನನ್ನು ಮೈಸೂರು ನಗರದಿಂದ ಮುಂದಿನ ಆರು ತಿಂಗಳವರೆಗೆ ಗಡಿಪಾರು ಮಾಡಲಾಗಿದೆ. ಗುರುವಾರ ಕೂಡ ಮನು ಎಂಬಾತನನ್ನು ೩ ತಿಂಗಳುಗಳ ಕಾಲ ಗಡಿಪಾರು ಮಾಡಲಾಗಿದೆ.
ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಸಂಜೆ ೬ ರಿಂದ ರಾತ್ರಿ ೧೦ ಗಂಟೆವರೆಗೆ ನಮ್ಮ ಸಿಬ್ಬಂದಿ ವಾಹನ ತಪಾಸಣೆ ಮಾಡುತ್ತಿದ್ದಾರೆ. ಈ ವೇಳೆ ನಮ್ಮ ಸಿಬ್ಬಂದಿಗಳು ಏನಾದರೂ ಹಣ ಕೇಳುವುದು, ಇತ್ಯಾದಿ ರೀತಿಯಲ್ಲಿ ವರ್ತಿಸಿದರೆ ನನ್ನ ಗಮನಕ್ಕೆ ತರಬಹುದು. ವಾಹನ ತಪಾಸಣೆ ವೇಳೆ ಮರಗಳ ಮರೆಯಲ್ಲಿ ನಿಂತು ಬೈಕ್‌ಗಳನ್ನು ಹಿಡಿಯಲು ಮುಂದಾಗಬಾರದು, ಸವಾರರಲ್ಲಿ ಗಾಬರಿ ಉಂಟು ಮಾಡಬಾರದು ಎಂದು ಸೂಚಿಸಿದ್ದೇನೆ.
-ರಮೇಶ್ ಬಾನೋತ್, ನಗರ ಪೊಲೀಸ್ ಆಯುಕ್ತ
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…