ಜಿಲ್ಲೆಗಳು

ರೌಡಿಶೀಟರ್ ಅಕ್ಮಲ್ ಪಾಷ ಗಡಿಪಾರು

ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 9 ಪ್ರಕರಣ ದಾಖಲು

ಮೈಸೂರು: ನಗರ ಪೊಲೀಸರು ರೌಡಿಶೀಟರ್ ಒಬ್ಬನನ್ನು ೬ ತಿಂಗಳುಗಳ ಕಾಲ ಗಡಿಪಾರು ಮಾಡಿದ್ದಾರೆ. ಗೌಸಿಯಾನಗರದ ಕೇರಳ ಮಸೀದಿ ರಸ್ತೆಯ ೨ನೇ ಕ್ರಾಸ್‌ನ ಅಕ್ಮಲ್ ಪಾಷ ಅಲಿಯಾಸ್ ಪೋಕ್ಲೈನ್ (೩೪) ಎಂಬಾತನೇ ಮುಂದಿನ ಆರು ತಿಂಗಳವರೆಗೆ ಗಡಿಪಾರು ಆದ ರೌಡಿ.

ಈತನ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು, ಉದಯಗಿರಿ, ದೇವರಾಜ, ಲಷ್ಕರ್ ಪೊಲೀಸ್ ಠಾಣೆಯಲ್ಲಿ ಒಟ್ಟು ೯ ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ. ಒಂದು ಪ್ರಕರಣದಲ್ಲಿ ಶಿಕ್ಷೆಯೂ ಆಗಿದೆ. ಇನ್ನು ಕೆಲವು ಪ್ರಕರಣಗಳು ತನಿಖೆಯಲ್ಲಿವೆ.

ಈತನ ವಿರುದ್ಧ ರೌಡಿ ಶೀಟ್ ತೆರೆದು ತೀವ್ರ ನಿಗಾದಲ್ಲಿ ಇಟ್ಟಿದ್ದಾಗಿಯೂ ಈತನು ಪೊಲೀಸರ ಕಣ್ಣು ತಪ್ಪಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಚಟುವಟಿಕೆಯಲ್ಲಿ ತೊಡಗಿದ್ದ. ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ರಾಬರಿ, ಮಹಿಳೆ ಮಾನಭಂಗ, ನಿಂದನೆಗಳಂತ ಅಪರಾಧ ಕೃತ್ಯಗಳಲ್ಲಿ ಭಗಿಯಾಗಿದ್ದು, ಈ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದ. ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಪಡೆದು ಕಾರಾಗೃಹದಿಂದ ಬಿಡುಗಡೆಯಾದ ನಂತರವೂ ತನ್ನ ಸಹಚರರನ್ನು ಒಗ್ಗೂಡಿಸಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಲು ಪ್ರಯತ್ನಿಸಿದ್ದ.

ತನ್ನ ವಿರುದ್ಧ ಸಾಕ್ಷಿ ನುಡಿಯದಂತೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವುದು, ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ರೀತಿಯಲ್ಲಿ ವರ್ತಿಸಿ, ಸಮಾಜಘಾತುಕ ಶಕ್ತಿಯಾಗಿ ಗೂಂಡಾವರ್ತನೆಯನ್ನು ಪ್ರದರ್ಶಿಸುವ ಪ್ರವೃತ್ತಿಯನ್ನು ಬೆಳೆಸಿಕೊಂಡು ಸಾರ್ವಜನಿಕರ ಆಸ್ತಿ ಮತ್ತು ಜೀವ ಹಾನಿ ಮಾಡುವ ಸಂಭವ ಇದೆ ಎಂದು ತಿಳಿದುಬಂದಿದ್ದರಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈತನನ್ನು ಮೈಸೂರು ನಗರದಿಂದ ಮುಂದಿನ ಆರು ತಿಂಗಳವರೆಗೆ ಗಡಿಪಾರು ಮಾಡಲಾಗಿದೆ. ಗುರುವಾರ ಕೂಡ ಮನು ಎಂಬಾತನನ್ನು ೩ ತಿಂಗಳುಗಳ ಕಾಲ ಗಡಿಪಾರು ಮಾಡಲಾಗಿದೆ.


ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಸಂಜೆ ೬ ರಿಂದ ರಾತ್ರಿ ೧೦ ಗಂಟೆವರೆಗೆ ನಮ್ಮ ಸಿಬ್ಬಂದಿ ವಾಹನ ತಪಾಸಣೆ ಮಾಡುತ್ತಿದ್ದಾರೆ. ಈ ವೇಳೆ ನಮ್ಮ ಸಿಬ್ಬಂದಿಗಳು ಏನಾದರೂ ಹಣ ಕೇಳುವುದು, ಇತ್ಯಾದಿ ರೀತಿಯಲ್ಲಿ ವರ್ತಿಸಿದರೆ ನನ್ನ ಗಮನಕ್ಕೆ ತರಬಹುದು. ವಾಹನ ತಪಾಸಣೆ ವೇಳೆ ಮರಗಳ ಮರೆಯಲ್ಲಿ ನಿಂತು ಬೈಕ್‌ಗಳನ್ನು ಹಿಡಿಯಲು ಮುಂದಾಗಬಾರದು, ಸವಾರರಲ್ಲಿ ಗಾಬರಿ ಉಂಟು ಮಾಡಬಾರದು ಎಂದು ಸೂಚಿಸಿದ್ದೇನೆ.

-ರಮೇಶ್ ಬಾನೋತ್, ನಗರ ಪೊಲೀಸ್ ಆಯುಕ್ತ

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago