ಹುಣಸೂರು: ನಗರ ಠಾಣಾ ವ್ಯಾಪ್ತಿಯಲ್ಲಿ 12 ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ರೌಡಿಶೀಟರ್ ವಾಸಿಂ ಅಲಿಯಾಸ್ ವೀಲ್ ವಾಸಿಂಗೆ ಒಂದು ವರ್ಷ ಕಾಲ ಗಡಿಪಾರು ಮಾಡಲಾಗಿದೆ.
ನಗರದ ಮುಸ್ಲಿಂ ಬ್ಲಾಕ್ ನಿವಾಸಿ ಅಕ್ರಂ ಷರೀಫ್ ಅವರ ಪುತ್ರ, ರೌಡಿಶೀಟರ್ ವಾಸಿಂ ಆಲಿಯಅಸ್ ವೀಲ್ ವಾಸಿಮ್ ವಿರುದ್ಧ ನಗರ ಠಾಣೆಯಲ್ಲಿ 12 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತ ಅಕ್ರಮ ಕೂಟದಲ್ಲಿ ಸೇರಿ ದೊಂಬಿ, ಮಹಿಳೆಯರ ಮೇಲೆ ದೌರ್ಜನ್ಯ, ಪೊಲೀಸರ ಮೇಲೆ ಹಲ್ಲೆ, ಕೊಲೆ ಯತ್ನ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡುವುದು ಇತರೆ ಗಂಭೀರ ಆರೋಪಗಳ ಅಪರಾಧಗಳನ್ನು ಮಾಡುತ್ತಿದ್ದರಿಂದ ಗೂಂಡಾ ಕಾಯಿದೆ ಅಡಿಯಲ್ಲಿ ಮುಂದಿನ ಒಂದು ವರ್ಷದವರೆಗೆ ಬಂಧನದಲ್ಲಿ ಇಡಲು ಹೈಕೋರ್ಟ್ ಸಲಹಾ ಮಂಡಳಿಯ ಸೂಚಿಸಿದ್ದು, ಅದರಂತೆ ವಾಸಿಂ ಮುಂದಿನ ವರ್ಷ ಕಾಲ ಹಿಂಡಗಲ ಕಾರಾಗೃಹದಲ್ಲೇ ಕಳೆಯಬೇಕಿದೆ.
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರು ಸಲಹಾ ಸಮಿತಿಯ ಮುಂದೆ ಹಾಜರಾಗಿ, ವಾಸಿಂ ಬಂಧನದ ಸಾಕಷ್ಟು ಕಾರಣಗಳನ್ನು ದಾಖಲೆಗಳ ಸಮೇತ ಮಂಡಿಸಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…