ಡಿಸೆಂಬರ್ 24ರಂದು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದ್ದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಗವಹಿಸಿದ್ದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.
ಹೋರಾಟಗಾರ್ತಿ ನಜ್ಮಾ ನಝೀರ್ ಎಂಬುವವರು ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಧರ್ಮಗಳ ನಡುವೆ ಗಲಭೆ ಹಾಗೂ ಅಶಾಂತಿ ಸೃಷ್ಠಿಸುವ ಹಾಗೆ ಮಾತಾನಾಡಿ ನ್ಯಾಯಾಂಗ ವ್ಯವಸ್ಥೆಯನ್ನೂ ಸಹ ಅಣಕಿಸಿದ್ದಾರೆ ಎಂದು ದೂರು ನೀಡಿದ್ದರು. ಈ ದೂರಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಪ್ರಭಾಕರ್ ಭಟ್ ಎಫ್‌ಐಆರ್ ರದ್ದು ಮಾಡುವಂತೆ ಮನವಿ ಮಾಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು ದೊರಕಿದೆ. ಶ್ರೀರಂಗಪಟ್ಟಣದ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ( ಜನವರಿ 17 ) ಜಾಮೀನು ನೀಡಿ ಆದೇಶ ಹೊರಡಿಸಿದೆ.
ಇಬ್ಬರು ಸ್ಥಳೀಯರ ಶ್ಯೂರಿಟಿ ಹಾಗೂ 2 ಲಕ್ಷ ರೂಪಾಯಿ ಮೌಲ್ಯದ ಬಾಂಡ್ ನೀಡುವಂತೆ ಹೇಳಿ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನೀಡಿದೆ.
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…