ಹನೂರು: ಸಮುದಾಯ ಭವನಗಳು ಸಭೆ ಸಮಾರಂಭಗಳಿಗೆ ಉಪಯೋಗವಾಗುವ ಜೊತೆಗೆ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಚಟುವಟಿಕೆ ಕೇಂದ್ರಗಳಾಗಿ ಸಮುದಾಯಕ್ಕೆ ಬಳಕೆಯಾಗಬೇಕು ಎಂದು ಶಾಸಕ ಆರ್ ನರೇಂದ್ರ ಅಭಿಪ್ರಾಯ ಪಟ್ಟರು .
ತಾಲ್ಲೂಕಿನ ಬುದುಬಾಳು ಗ್ರಾಮದಲ್ಲಿ ಆದಿ ಜಾಂಬವ ಸಮುದಾಯ ಭವನ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಹನೂರು ಕ್ಷೇತ್ರದಲ್ಲಿ ಒಟ್ಟು 140 ಸಮುದಾಯ ಭವನಗಳನ್ನು ನಿರ್ಮಾಣ ಮಾಡಲಾಗಿದ್ದು, ಅದರಲ್ಲಿ 40 ಸಮುದಾಯ ಭವನಗಳು ಆದಿ ಜಾಂಬವ ಜನಾಂಗದವರಿಗೆ ನಿರ್ಮಿಸಲಾಗಿದೆ. ಮದುವೆ ಸಭೆ ಸಮಾರಂಭಗಳ ಜೊತೆಗೆ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಅಭಿವೃದ್ಧಿಗೆ ಇಂತಹ ಸಮುದಾಯಗಳು ಭವನಗಳನ್ನು ಬಳಸಿಕೊಂಡಾಗ ಸಾರ್ಥಕತೆ ಯಾಗುತ್ತದೆ.
ಮಕ್ಕಳಿಗಾಗಿ ಆಸ್ತಿ ಮಾಡುವ ಬದಲಾಗಿ ನಿಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣ ಕೊಡಿಸಿ ಅವರನ್ನೇ ಆಸ್ತಿಯನ್ನಾಗಿ ಮಾಡಿ. ಅದರಲ್ಲೂ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವುದಕ್ಕೆ ಆದ್ಯತೆ ನೀಡಬೇಕು
ಮುಂಬರುವ ವಿಧಾನಸಭಾ ಚುನಾವಣೆಯು ಹಣಬಲ ಮತ್ತು ಜನಬಲದ ಆಧಾರದಲ್ಲಿ ನಡೆಯುತ್ತದೆ. ಆದ್ದರಿಂದ ನಿಮ್ಮ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿರುವ ವ್ಯಕ್ತಿಯನ್ನು ಬೆಂಬಲಿಸಬೇಕು ಎಂದರು. ಬೂದ ಬಾಳು ವೆಂಕಟರಮಣ ಸ್ವಾಮಿ ನಮ್ಮ ಮನೆದೇವರು ಸುಮಾರು ನಾಲ್ಕು ತಲೆಮಾರುಗಳಿಂದ ಬೂದು ಬಾಳು ಮತ್ತು ನಮ್ಮ ಕುಟುಂಬಕ್ಕೆ ಅವಿನಾಭವ ಸಂಬಂಧ ಇದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಿಂಗಾನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸರೋಜಮ್ಮ, ಉಪಾಧ್ಯಕ್ಷ ರಾಜಮ್ಮ, ಸದಸ್ಯರಾದ ಭಾಗ್ಯಲಕ್ಷ್ಮಿ ಕಾಂಗ್ರೆಸ್ ಮುಖಂಡರಾದ ಪುಟ್ಟರಾಜು, ಗುಂಡಾಪುರ ಮಹದೇಶ್.
ಸಮುದಾಯದ ಮುಖಂಡರಾದ. ಬೂದುಬಾಳು ರಂಗಯ್ಯ, ಮಹದೇವ, ಬಾಲರಾಜು, ರಾಜೇಶ, ಬಸವಣ್ಣ, ರಾಚಯ್ಯ. ಕಮಲಾಪುರ ರಾಜು ಹಾಗೂ ಗ್ರಾಮಸ್ಥರುಗಳು ಇದ್ದರು
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…