ಜಿಲ್ಲೆಗಳು

ಇಲ್ಲೊಂದು ಸಮುದಾಯಕ್ಕೆ ಗೌರಿ-ಗಣೇಶ ಹಬ್ಬವೇ ತೊಡಕು

  • ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯ.‌
  • ವಿಘ್ನ ನಿವಾರಕನೇ ಇಲ್ಲಿ ಜನರಿಗೆ ವಿಘ್ನ.

ಚಾಮರಾಜನಗರ: ದೇಶದಾದ್ಯಂತ ಬಹಳ ಶ್ರದ್ಧಾ ಭಕ್ತಿಯಿಂದ, ಸಡಗರ ಸಂಭ್ರಮದಿಂದ ಆಚರಣೆ ಮಾಡುವ ಗೌರಿ ಗಣೇಶ ಹಬ್ಬವೇ ಇಲ್ಲೊಂದು ಸಮುದಾಯಕ್ಕೆ ತೊಡಕಾಗಿದ್ದು, ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯದಿಂದ ಹಬ್ಬ ಆಚರಿಸುವುದನ್ನೇ ಕೈ ಬಿಟ್ಟಿದ್ದಾರೆ.

ನಗರದ ಉಪ್ಪಾರ ಸಮುದಾಯದ ಕೆಲವು ಕುಟುಂಬ ವರ್ಗದವರು ಗೌರಿ-ಗಣೇಶ ಹಬ್ಬವನ್ನು ಆಚರಣೆ ಮಾಡುವುದಿಲ್ಲ, ಇದು ಅಚ್ಚರಿ ಎನಿಸಿದರೂ ಇದು ಸತ್ಯ ಮನೆಯಲ್ಲಿ ಅನ್ನ, ಸ್ನಾನವನ್ನು ಮಾಡದ ಸಂಪ್ರದಾಯ ಶತಮಾನಗಳಿಂದ ನಡೆದುಕೊಂಡು ಬಂದಿದೆ. ವಿಘ್ನ ವಿನಾಯಕನನ್ನು ಇಡೀ ದೇಶವೇ ಬರಮಾಡಿಕೊಂಡು ಸಂಭ್ರಮಪಟ್ಟರೇ, ಇವರು ಮಾತ್ರ ಈ ಹಬ್ಬದಿಂದ ದೂರವೇ ಉಳಿಯುತ್ತಾರೆ. ಹಬ್ಬದ ಸಂಭ್ರಮದಿಂದ ಉಪ್ಪಾರ ಸಮುದಾಯದ ಶೇ.೭೦ ಕ್ಕೂ ಹೆಚ್ಚು ಮಂದಿ ದೂರ ಉಳಿಯುತ್ತಾರೆ.

ಗೌರಿ-ಗಣೇಶ ಹಬ್ಬ ಮಾಡುವುದಿರಲಿ, ರುಚಿಯಾದ ಊಟವನ್ನೂ ಸಹ ಈ ದಿನದಂದು ಸೇವಿಸುವುದಿಲ್ಲ. ಕೆಲವರು ಮುದ್ದೆ, ಉಪ್ಪುಸಾರು ಸೇವಿಸಿದರೆ, ಇನ್ನೂ ಕೆಲವರು ಉಪ್ಪುಸಾರಿಗೆ ಒಗ್ಗರಣೆಯನ್ನೂ ಹಾಕದೇ ಸಪ್ಪೆ ಸಾರಿನಲ್ಲೇ‌ ಮುದ್ದೆ ತಿನ್ನುತ್ತಾರೆ. ಕೆಲವರು ಇದನ್ನು ಧಿಕ್ಕರಿಸಿ ಅನ್ನ- ಸಾರು ಮಾಡಿದ್ರೆ, ಅದನ್ನು ತಿನ್ನುವ ಮೊದಲೇ ಯಾರಾದರೂ ಮೃತಪಡುತ್ತಾರಂತೆ. ಆಹಾರದಲ್ಲಿ ಹುಳು ಕಾಣಿಸಿಕೊಂಡ ಪ್ರಸಂಗಗಳು ನಡೆದಿದ್ದರಿಂದ ಹಬ್ಬದ ಗೋಜಿಗೆ ಹೋಗದೇ ಮುದ್ದೆ- ಉಪ್ಪು ಸಾರಿಗಷ್ಟೇ ತೃಪ್ತಿ ಪಡುತ್ತಿದ್ದಾರೆ.

ಹಬ್ಬ ಆಚರಿಸದ ಕಾರಣ: ಗೌರಿ ಹಬ್ಬ ಆಚರಿಸಿದರೇ ಮಕ್ಕಳಿಗೆ ಕೆಡುಕಾಗುವ ಭಯ ಈ ಸಮುದಾಯದಲ್ಲಿ ರೂಢಿಗತವಾಗಿ ನಡೆದುಕೊಂಡು ಬಂದಿದೆ. ಹಬ್ಬ ಆಚರಣೆಗೆ ಮುಂದಾದಗಲೆಲ್ಲಾ ಮಕ್ಕಳ ಸಾವು, ಮನೆಯಲ್ಲಿ ಹಿರಿಯರ ಸಾವು ಸಂಭವಿಸುವುದರಿಂದ ಹಬ್ಬದ ಆಚರಣೆಯನ್ನೇ ಈ ಸಮುದಾಯ ಕೈ ಬಿಟ್ಟಿದೆ. ಹಿರಿಯರ ಸಂಪ್ರದಾಯ ಇಂದೂ ಕೂಡ ಹಾಗೆ ಮುಂದುವರೆದಿದ್ದು, ಹಬ್ಬದ ಮಾರನೇ ದಿನ ಸ್ನಾನ ಮಾಡಿಕೊಂಡು ಗಣಪನಿಗೆ ಪೂಜೆ ಸಲ್ಲಿಸುತ್ತಾರೆ‌. ಇನ್ನೂ, ಕೆಲವರು ಮೂರು ದಿನ ಅನ್ನ ಮಾಡದೇ, ದೇಗುಲಕ್ಕೆ ಹೋಗದೆ, ಒಗ್ಗರಣೆ ಹಾಕುವುದನ್ನು ನಿಲ್ಲಿಸುತ್ತಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago