Mysore
27
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ವೃತ್ತ ನಿರೀಕ್ಷಕರಾಗಿ ಸಂತೋಷ್ ಕಶ್ಯಪ್ ಅಧಿಕಾರ ಸ್ವೀಕಾರ

ಹನೂರು : ತಾಲ್ಲೂಕಿನ ರಾಮಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾಗಿ ಸಂತೋಷ ಕಶ್ಯಪ್ ಅಧಿಕಾರ ವಹಿಸಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಹನೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿರುವುದರಿಂದ ಈ ಭಾಗದಲ್ಲಿನ ಗ್ರಾಮಗಳು ಪರಿಚಿತವಾಗಿವೆ. ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕಾನೂನು ಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳು ಕಂಡುಬಂದರೆ ಸಾರ್ವಜನಿಕರು ಮಾಹಿತಿ ನೀಡಿ ಸಹಕರಿಸಬೇಕು. ಸಾರ್ವಜನಿಕರು ನಮ್ಮನ್ನು ನೇರವಾಗಿ ಸಂಪರ್ಕಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!