ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮೂರುವರೆ ತಾಸು ಸಭೆ ನಡೆಸಿದ ಅಲೋಕ್ ಕುಮಾರ್
ಮೈಸೂರು: ಸ್ಯಾಂಟ್ರೊ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುಮಾರು ಮೂರುವರೆ ತಾಸು ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಹೆಚ್ಚಿನ ವಿಚಾರಣೆ ಸಂಬಂಧ ಮಂಗಳವಾರ ನಗರಕ್ಕೆ ಭೇಟಿ ನೀಡಿದ ಅವರು, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಧ್ಯಾಹ್ನ ಮೂರುವರೆ ತಾಸು ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಮತ್ತು ಪರಶು, ಸಂತ್ರಸ್ತ ಮಹಿಳೆ, ಕುಟುಂಬ ಸದಸ್ಯರಿಂದ ದಾಖಲೆಗಳ ಸಮೇತ ಮಾಹಿತಿ ಪಡೆದರು.
ಸ್ಯಾಂಟ್ರೊ ರವಿ ವಿರುದ್ಧ ೧೯೮೬ ರಿಂದ ೨೦೨೩ರ ಜ.೨ರವರೆಗೆ ಆತನ ವಿರುದ್ಧ ದಾಖಲಾದ ಪ್ರಕರಣಗಳ ಮಾಹಿತಿ, ಆತನ ಹಣಕಾಸು ಸಂಸ್ಥೆಗಳ ಮಾಹಿತಿ, ಆಸ್ತಿ ದಾಖಲೆ, ಪ್ರಭಾವಿಗಳೊಂದಿಗೆ ಆತ ತೆಗೆಸಿಕೊಂಡಿರುವ ಭಾವಚಿತ್ರಗಳು, ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಆತನ ಪಾತ್ರದ ಕುರಿತಂತೆ ೧೪೦ ಪುಟಗಳ ಸಮಗ್ರ ದಾಖಲೆಗಳನ್ನು ಸ್ಟ್ಯಾನ್ಲಿ, ಪರಶು ಅವರು ಎಡಿಜಿಪಿಗೆ ಸಲ್ಲಿಸಿದರು.
ಆರೋಪಿಯು ಸಮಾಜದ ಸ್ವಾಸ್ಥ್ಯಕೆಡಿಸುತ್ತಿದ್ದು, ಸ್ಯಾಂಟ್ರೊ ರವಿಯೊಂದಿಗಿನ ಒಡನಾಟದಿಂದ ಪೊಲೀಸ್ ಇಲಾಖೆಯ ಹಿರಿಯ- ಕಿರಿಯ ಅಧಿಕಾರಿಗಳು ಕಳಂಕಿತರಾಗಿದ್ದಾರೆ. ಅವರನ್ನೂ ತನಿಖೆಗೆ ಒಳಪಡಿಸಬೇಕು ಎಂದು ಒಡನಾಡಿ ಸಂಸ್ಥೆಯ ವತಿಯಿಂದ ಆಗ್ರಹಿಸಲಾಯಿತು.
ಈ ವೇಳೆ ಸಂತ್ರಸ್ತೆಯು ‘ಇದುವರೆಗೂ ಆರೋಪಿಯನ್ನು ಬಂಧಿಸಿಲ್ಲವೇಕೆ? ಇದರಿಂದ ನನಗೆ ಅನ್ಯಾಯವಾಗಿದೆ’ ಎಂದು ಅಳಲು ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಎಡಿಜಿಪಿ ಅಲೋಕ್ ಕುಮಾರ್, ಆರೋಪಿ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ಈಗಾಗಲೇ ವಿಶೇಷ ತಂಡ ರಚಿಸಿ, ಆತನ ಚಲನವಲನದ ಮೇಲೆ ನಿಗಾಯಿಡಲಾಗಿದೆ. ಆದಷ್ಟು ಶೀಘ್ರ ಬಂಧಿಸಲಾಗುವುದು’ ಎಂದು ಸಂತ್ರಸ್ತೆಗೆ ಭರವಸೆ ನೀಡಿದರು.
ಅಲ್ಲದೇ, ಸ್ಯಾಂಟ್ರೊ ರವಿಗೆ ಸಹಕರಿಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಪ್ರವೀಣ್, ಸುಳ್ಳುಪಾತ್ರ ಹಾಗೂ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿ ಸಂತ್ರಸ್ತೆ, ಆಕೆಯ ಸಹೋದರಿಯನ್ನು ಬಂಧಿಸಿದ್ದಕ್ಕೆ ಪ್ರತಿಯಾಗಿ ಪೊಲೀಸ್ ಅಧಿಕಾರಿಗಳಿಗೆ ಗೂಗಲ್ ಪೇ ಮೂಲಕ ಹಣ ಪಾವತಿಸಿದ ದಾಖಲೆಗಳನ್ನು ಸಂತ್ರಸ್ತೆ ಸಲ್ಲಿಸಿದರು.
ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಡಿಸಿಪಿ ಗೀತಾ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಎಸಿಪಿ ಶಿವಶಂಕರ್, ವಿಜಯ ನಗರ ಠಾಣೆ ಇನ್ಸ್‌ಪೆಕ್ಟರ್ ರವಿಶಂಕರ್ ಹಾಜರಿದ್ದರು.
ನಗರ ಪೊಲೀಸ್ ಆಯುಕ್ತರಿಗೆ ಸೂಚನೆ: ನಗರ ಪೊಲೀಸ್ ಆಯುಕ್ತ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್ ಅವರು, ಒಡನಾಡಿ ಸಂಸ್ಥೆಯ ನಿರ್ದೇಶಕರು, ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರಿಂದ ಹಲವು ಮಾಹಿತಿಯನ್ನು ಪಡೆದುಕೊಂಡರು. ಸ್ಯಾಂಟ್ರೊ ರವಿ ಪ್ರಕರಣದ ಇಂಚಿಂಚೂ ತನಿಖೆಯಾಗಬೇಕು. ಆತನ ವಿರುದ್ಧ ದಾಖಲಾಗಿರುವ ಪ್ರಕರಣ, ಹಣಕಾಸು ವ್ಯವಹಾರಗಳು, ಅತ್ಯಾಚಾರ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಅವರಿಗೆ ಸಭೆಯಲ್ಲಿಯೇ ಸೂಚನೆ ನೀಡಿದರು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…