ಜಿಲ್ಲೆಗಳು

ಸ್ಯಾಂಟ್ರೊ ರವಿ ಪ್ರಕರಣ: ಮಾಹಿತಿ ಕಲೆಹಾಕಿದ ಎಡಿಜಿಪಿ

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮೂರುವರೆ ತಾಸು ಸಭೆ ನಡೆಸಿದ ಅಲೋಕ್ ಕುಮಾರ್

ಮೈಸೂರು: ಸ್ಯಾಂಟ್ರೊ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುಮಾರು ಮೂರುವರೆ ತಾಸು ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

ಹೆಚ್ಚಿನ ವಿಚಾರಣೆ ಸಂಬಂಧ ಮಂಗಳವಾರ ನಗರಕ್ಕೆ ಭೇಟಿ ನೀಡಿದ ಅವರು, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಧ್ಯಾಹ್ನ ಮೂರುವರೆ ತಾಸು ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಮತ್ತು ಪರಶು, ಸಂತ್ರಸ್ತ ಮಹಿಳೆ, ಕುಟುಂಬ ಸದಸ್ಯರಿಂದ ದಾಖಲೆಗಳ ಸಮೇತ ಮಾಹಿತಿ ಪಡೆದರು.
ಸ್ಯಾಂಟ್ರೊ ರವಿ ವಿರುದ್ಧ ೧೯೮೬ ರಿಂದ ೨೦೨೩ರ ಜ.೨ರವರೆಗೆ ಆತನ ವಿರುದ್ಧ ದಾಖಲಾದ ಪ್ರಕರಣಗಳ ಮಾಹಿತಿ, ಆತನ ಹಣಕಾಸು ಸಂಸ್ಥೆಗಳ ಮಾಹಿತಿ, ಆಸ್ತಿ ದಾಖಲೆ, ಪ್ರಭಾವಿಗಳೊಂದಿಗೆ ಆತ ತೆಗೆಸಿಕೊಂಡಿರುವ ಭಾವಚಿತ್ರಗಳು, ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಆತನ ಪಾತ್ರದ ಕುರಿತಂತೆ ೧೪೦ ಪುಟಗಳ ಸಮಗ್ರ ದಾಖಲೆಗಳನ್ನು ಸ್ಟ್ಯಾನ್ಲಿ, ಪರಶು ಅವರು ಎಡಿಜಿಪಿಗೆ ಸಲ್ಲಿಸಿದರು.
ಆರೋಪಿಯು ಸಮಾಜದ ಸ್ವಾಸ್ಥ್ಯಕೆಡಿಸುತ್ತಿದ್ದು, ಸ್ಯಾಂಟ್ರೊ ರವಿಯೊಂದಿಗಿನ ಒಡನಾಟದಿಂದ ಪೊಲೀಸ್ ಇಲಾಖೆಯ ಹಿರಿಯ- ಕಿರಿಯ ಅಧಿಕಾರಿಗಳು ಕಳಂಕಿತರಾಗಿದ್ದಾರೆ. ಅವರನ್ನೂ ತನಿಖೆಗೆ ಒಳಪಡಿಸಬೇಕು ಎಂದು ಒಡನಾಡಿ ಸಂಸ್ಥೆಯ ವತಿಯಿಂದ ಆಗ್ರಹಿಸಲಾಯಿತು.

ಈ ವೇಳೆ ಸಂತ್ರಸ್ತೆಯು ‘ಇದುವರೆಗೂ ಆರೋಪಿಯನ್ನು ಬಂಧಿಸಿಲ್ಲವೇಕೆ? ಇದರಿಂದ ನನಗೆ ಅನ್ಯಾಯವಾಗಿದೆ’ ಎಂದು ಅಳಲು ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಎಡಿಜಿಪಿ ಅಲೋಕ್ ಕುಮಾರ್, ಆರೋಪಿ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ಈಗಾಗಲೇ ವಿಶೇಷ ತಂಡ ರಚಿಸಿ, ಆತನ ಚಲನವಲನದ ಮೇಲೆ ನಿಗಾಯಿಡಲಾಗಿದೆ. ಆದಷ್ಟು ಶೀಘ್ರ ಬಂಧಿಸಲಾಗುವುದು’ ಎಂದು ಸಂತ್ರಸ್ತೆಗೆ ಭರವಸೆ ನೀಡಿದರು.

ಅಲ್ಲದೇ, ಸ್ಯಾಂಟ್ರೊ ರವಿಗೆ ಸಹಕರಿಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಪ್ರವೀಣ್, ಸುಳ್ಳುಪಾತ್ರ ಹಾಗೂ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿ ಸಂತ್ರಸ್ತೆ, ಆಕೆಯ ಸಹೋದರಿಯನ್ನು ಬಂಧಿಸಿದ್ದಕ್ಕೆ ಪ್ರತಿಯಾಗಿ ಪೊಲೀಸ್ ಅಧಿಕಾರಿಗಳಿಗೆ ಗೂಗಲ್ ಪೇ ಮೂಲಕ ಹಣ ಪಾವತಿಸಿದ ದಾಖಲೆಗಳನ್ನು ಸಂತ್ರಸ್ತೆ ಸಲ್ಲಿಸಿದರು.
ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಡಿಸಿಪಿ ಗೀತಾ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಎಸಿಪಿ ಶಿವಶಂಕರ್, ವಿಜಯ ನಗರ ಠಾಣೆ ಇನ್ಸ್‌ಪೆಕ್ಟರ್ ರವಿಶಂಕರ್ ಹಾಜರಿದ್ದರು.


ನಗರ ಪೊಲೀಸ್ ಆಯುಕ್ತರಿಗೆ ಸೂಚನೆ: ನಗರ ಪೊಲೀಸ್ ಆಯುಕ್ತ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್ ಅವರು, ಒಡನಾಡಿ ಸಂಸ್ಥೆಯ ನಿರ್ದೇಶಕರು, ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರಿಂದ ಹಲವು ಮಾಹಿತಿಯನ್ನು ಪಡೆದುಕೊಂಡರು. ಸ್ಯಾಂಟ್ರೊ ರವಿ ಪ್ರಕರಣದ ಇಂಚಿಂಚೂ ತನಿಖೆಯಾಗಬೇಕು. ಆತನ ವಿರುದ್ಧ ದಾಖಲಾಗಿರುವ ಪ್ರಕರಣ, ಹಣಕಾಸು ವ್ಯವಹಾರಗಳು, ಅತ್ಯಾಚಾರ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಅವರಿಗೆ ಸಭೆಯಲ್ಲಿಯೇ ಸೂಚನೆ ನೀಡಿದರು.

andolanait

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

18 mins ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

29 mins ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

34 mins ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

36 mins ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

38 mins ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

57 mins ago