ಮೈಸೂರು: ನಾನು ಸಿ.ಟಿ.ರವಿ, ಸ್ಯಾಂಟ್ರೋ ರವಿ ಯಾರೆಂದೂ ಗೊತ್ತಿಲ್ಲ.ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯಿಸಿದರು.
ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ಈಗ ಯಾರು ಎಲ್ಲಿ ಬೇಕಾದರೂ, ಯಾರ ಜತೆಗೆ ಬೇಕಾದರೂ ಫೋಟೋ ತೆಗೆಸಿಕೊಳ್ಳುತ್ತಾರೆ. ಸಾರ್ವಜನಿಕ ಜೀವನದಲ್ಲಿ ಇರುವವರು ಹೋದ ಕಡೆ ಎಲ್ಲ ಸೆಲ್ಛಿಗೆ ಫೋಸ್ ಕೊಟ್ಟಿರುತ್ತಾರೆ. ಹಾಗೆಂದ ಮಾತ್ರಕ್ಕೆ ಫೋಟೋ ತೆಗೆಸಿಕೊಂಡವರ ಜತೆಗೆಲ್ಲ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದರು. ಸಾರ್ವಜನಿಕರಿಗೆ ಕೋಟ್ಯಂತರ ರೂ. ಪಂಗನಾಮ ಹಾಕಿದ ಐಎಂಎ ಹಗರಣದ ಎ ಒನ್ ಆರೋಪಿ ಜತೆ ಕುಮಾರಸ್ವಾಮಿ ಫೋಟೋ ತೆಗೆಸಿಕೊಂಡಿದ್ದಾರೆ. ಹಾಗೆಂದು ಕುಮಾರಸ್ವಾಮಿ ಅವರನ್ನು ಐಎಂಎ ಹಗರಣದ ಎ ಟು ಆರೋಪಿ ಎನ್ನಲು ಸಾಧ್ಯವೇ ಎಂದು ಖಾರವಾಗಿ ಪ್ರಶ್ನಿಸಿದರು.
ಹಲವು ಸಚಿವರು, ಶಾಸಕರು ತಮಗೆ ಸಂಬಂಧಿಸಿದ ಆಕ್ಷೇಪಾರ್ಹ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ‘‘ಪ್ರತಿಪಕ್ಷ ನಾಯಕರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಆದರೆ ಯಾವ್ಯಾವ ವಿಚಾರಕ್ಕೆ ತಡೆಯಾಜ್ಞೆ ತಂದಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.
ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ…
ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದಲ್ಲಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದೆ. ನಗರ ಸಾರಿಗೆಗೆ ಪ್ರಸಕ್ತ ವರ್ಷ ೯೬…
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…