ಜಿಲ್ಲೆಗಳು

ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಪ್ರತಿಭಟನೆ

ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿAದ ಮೆರವಣಿಗೆ ಹೊರಟ ಮುಖಂಡರು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದರು.
ಸತೀಶ್ ಜಾರಕಿಹೊಳಿ ಅವರು ನ.೭ ರಂದು ಹಿಂದೂ ಎಂಬುದು ಕೆಟ್ಟ ಹಾಗೂ ಅಶ್ಲೀಲ ಶಬ್ದವಾಗಿದೆ ಎಂದು ಅವಹೇಳನÀಕಾರಿಯಾಗಿ ಮಾತನಾಡಿರುವುದು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರಗೊಂಡಿದೆ. ಇವರ ಹೇಳಿಕೆ ದೇಶದ ಹಿಂದೂಗಳ ಮನಸ್ಸಿಗೆ ನೋವುಂಟುಮಾಡಿದೆ ಎಂದು ಕಿಡಿಕಾರಿದರು.
ಸುಪ್ರೀಂಕೋರ್ಟ್ನ ಹಿಂದೂ ಪದದ ಬಗೆಗಿನ ಅಭಿಪ್ರಾಯವನ್ನು ಸತೀಶ್ ಜಾರಕಿಹೊಳಿ ಅವರ ಹೇಳಿಕೆ ವಿರೋಧಿಸಿದಂತೆ ಆಗಿದೆ. ಹಿಂದೂ ಎಂಬ ಪದವನ್ನು ಹೀಯಾಳಿಸಿ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂದು ಆರೋಪಿಸಿದರು.
ಇಂತಹ ಹೇಳಿಕೆಗಳ ಮೂಲಕ ರಾಜ್ಯ ಹಾಗೂ ದೇಶದ ಸಾಮರಸ್ಯ ಹಾಳು ಮಾಡಿ ವೈಯಕ್ತಿಕ ಲಾಭ ಪಡೆಯಲು ಮುಂದಾಗಿದ್ದಾರೆ. ಆದ್ದರಿಂದ ಕೂಡಲೇ ಸತೀಶ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾಡಾಧ್ಯಕ್ಷ ನಿಜಗುಣರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಸುಂದರ್, ಉಪಾಧ್ಯಕ್ಷ ವೃಷಬೇಂದ್ರಪ್ಪ, ಪ್ರಧಾನ ಕಾರ್ಯದರ್ಶಿಗಳಾದ ನಾಗಶ್ರೀಪ್ರತಾಪ್, ನಾರಾಯಣ ಪ್ರಸಾದ್, ಮಂಗಲ ಶಿವಕುಮಾರ್, ನಗರಸಭಾಧ್ಯಕ್ಷೆ ಆಶಾ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚAದ್ರ, ಶಿವು ವಿರಾಟ್, ಸೂರ್ಯ, ನೂರೊಂದುಶೆಟ್ಟಿ, ಕೆಲ್ಲಂಬಳ್ಳಿ ಸೋಮನಾಯಕ, ಕೆ.ಆರ್.ಬಸವರಾಜು, ಮೂಡ್ಲುಪುರ ನಂದೀಶ್ ಇತರರಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago