ಮೈಸೂರು: ಹಿಂದೂ ಪದದ ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯು ಅತ್ಯಂತ ಖಂಡನೀಯವಾಗಿದ್ದು, ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ.
ಹಿಂದೂ ಧರ್ಮಕ್ಕೆ ಭಾರತದಲ್ಲಿ ತನ್ನದೇ ಆದ ಪರಂಪರೆ,ಇತಿಹಾಸವಿದೆ. ನಾನೊಬ್ಬ ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ. ಸುಪ್ರೀಂಕೋರ್ಟ್ ಹಿಂದೂ ಪದದ ವಿಚಾರದಲ್ಲಿ ತನ್ನದೇ ಆದ ಗೌರವವನ್ನು ಹೊಂದಿರುವುದನ್ನು ಉಲ್ಲೇಖಿಸಿದೆ. ಹೀಗಿದ್ದರೂ ಸತೀಶ್ ಜಾರಕಿಹೊಳಿ ಈ ರೀತಿ ಮಾತನ್ನಾಡಿರುವುದು ಸಹಿಸಲಾಗದು ಎಂದು ಹೇಳಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಂಡಿಸುವುದಕ್ಕೆ ಸೀಮಿತವಾಗದೆ ಅವರನ್ನು ಪಕ್ಷದ ಹುದ್ದೆಯಿಂದ ತೆಗೆದುಹಾಕಿ, ಪಕ್ಷದಿಂದ ಅಮಾನತುಪಡಿಸಬೇಕು ಎಂದು ಒತ್ತಾಯಿಸಿದರು. ಮಾನವ ಬಂಧುತ್ವ ವೇದಿಕೆ ಮೂಲಕ ಸಮಾಜವನ್ನು ಸರಿಪಡಿಸುವ ದಾರಿಗೆ ಮುಂದಾಗುವ ಬದಲಿಗೆ ಜಾತ್ಯತೀತತೆ ಹೆಸರಿನಲ್ಲಿ ಹಿಂದೂತ್ವದ ವಿರುದ್ಧ,ಹಿಂದೂ ಪದದ ಬಗ್ಗೆ ಅಗೌರವ ತೋರಿರುವುದು ಸರಿಯಲ್ಲ. ಒಬ್ಬ ಜವಾವ್ದಾರಿಯುತ ನಾಯಕನಾಗಿ ನೀಡಿರುವ ಹೇಳಿಕೆ ನೋಡಿದರೆ ಅವರಲ್ಲಿ ಪ್ರಬುದ್ಧತೆಯ ಕೊರತೆ ಕಾಡುತ್ತಿದೆ ಎಂದು ಟೀಕಿಸಿದ್ದಾರೆ.
ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…
ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…
ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…
ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…
ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…