ಮೈಸೂರು: ಆರ್‌ಎಸ್‌ಎಸ್‌ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಆ.೨೩ರಿಂದ ೩೦ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ‘ಸಾವರ್ಕರ್ ರಥಯಾತ್ರೆ’ ಆಯೋಜಿಸಲಾಗಿದೆ ಎಂದು ಸಾವರ್ಕರ್ ಪ್ರತಿಷ್ಠಾನ ಮೈಸೂರು ಸಂಘದ ಅಧ್ಯಕ್ಷರಾದ ಯಶಸ್ವಿನಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.೨೩ರಂದು ಬೆಳಿಗ್ಗೆ ೧೧ಕ್ಕೆ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಹೊರಡುವ ರಥಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡುವರು. ಟೆರಿಷಿಯನ್ ಕಾಲೇಜು ಮಾರ್ಗವಾಗಿ ಕ್ಯಾತಮಾರನಹಳ್ಳಿ, ತಿಲಕನಗರ, ಮಾತೃ ಮಂಡಳಿ ವೃತ್ತ, ಟೆಂಟ್ ವೃತ್ತ, ವಿವೇಕಾನಂದ ನಗರ, ಚಾಮುಂಡಿಪುರಂ ವೃತ್ತ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಥಯಾತ್ರೆ ಸಂಚರಿಸಲಿದೆ ಎಂದರು.
ಆ.೨೪ರಂದು ಮೈಸೂರು ಜಿಲ್ಲೆಯ ಜಯಪುರ, ಹಂಪಾಪುರ, ಎಚ್.ಡಿ.ಕೋಟೆ, ಸರಗೂರು ಭಾಗಗಳಲ್ಲಿ ರಥಯಾತ್ರೆ ನಡೆಯಲಿದೆ. ಆ.೨೫ರಂದು ನಂಜನಗೂಡು, ಬೇಗೂರು, ಗುಂಡ್ಲುಪೇಟೆ, ತೆರಕಣಾಂಬಿ. ಆ.೨೬ರಂದು ಚಾಮರಾಜನಗರ, ಸಂತೇಮರಹಳ್ಳಿ, ಯಳಂದೂರು, ಕೊಳ್ಳೇಗಾಲ, ಹನೂರು, ಕೌದಳ್ಳಿ. ಆ.೨೭ರಂದು ತಿ.ನರಸೀಪುರ, ಬನ್ನೂರು, ಕಿರುಗಾವಲು, ಮಳವಳ್ಳಿ, ಹಲಗೂರು, ಕೆ.ಎಂ.ದೊಡ್ಡಿ, ಮದ್ದೂರು, ಬೇಸಗರಹಳ್ಳಿ. ಆ.೨೮ರಂದು ಕೊಪ್ಪ, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ. ಆ.೨೯ರಂದು ಕಿಕ್ಕೇರಿ, ಕೆ.ಆರ್.ಪೇಟೆ, ಸಾಲಿಗ್ರಾಮ, ಪಿರಿಯಾಪಟ್ಟಣದಲ್ಲಿ ರಥಯಾತ್ರೆ ನಡೆಯಲಿದ್ದು, ಆ.೩೦ರಂದು ಹುಣಸೂರು ಮಾರ್ಗವಾಗಿ ಮೈಸೂರಿಗೆ ಹಿಂದಿರುಗಲಿದೆ. ಬಳಿಕ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಮಾರೋಪ ಸಮಾರಂಭ ಜರುಗಲಿದೆ ಎಂದು ತಿಳಿಸಿದರು.
ರಥಯಾತ್ರೆ ಸಂಯೋಜಕ ರಜತ್, ಸಂಘದ ಪದಾಧಿಕಾರಿಗಳಾದ ರಾಕೇಶ್ ಭಟ್, ಶಿವಕುಮಾರ್, ನಿಶಾಂತ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…