ಮೈಸೂರು : ಆರ್‌ಎಸ್‌ಎಸ್‌ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಇಂದಿನಿಂದ ಆ. 30ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಹಮ್ಮಿಕೊಂಡಿರುವ ‘ಸಾವರ್ಕರ್ ರಥಯಾತ್ರೆ’ಯನ್ನು ಇಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉದ್ಘಾಟಿಸಿದರು.
ಸಾವರ್ಕರ್ ಅವರ ಬಗ್ಗೆ, ಅವರ ದೇಶಭಕ್ತಿ, ಹೋರಾಟಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವೀರ್ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ಆಯೋಜಿಸಗಿದ್ದು, ಯಾತ್ರೆಯು ಟೆರಿಷಿಯನ್ ಕಾಲೇಜು ಮಾರ್ಗವಾಗಿ ಕ್ಯಾತಮಾರನಹಳ್ಳಿ, ತಿಲಕನಗರ, ಮಾತೃ ಮಂಡಳಿ ವೃತ್ತ, ಟೆಂಟ್ ವೃತ್ತ, ವಿವೇಕಾನಂದ ನಗರ, ಚಾಮುಂಡಿಪುರಂ ವೃತ್ತ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಂಚಾರ ಮಾಡಲಿದೆ.
ಆ.24 ರ ನಾಳೆ ಮೈಸೂರು ಜಿಲ್ಲೆಯ ಜಯಪುರ, ಹಂಪಾಪುರ, ಎಚ್.ಡಿ.ಕೋಟೆ, ಸರಗೂರು ಭಾಗಗಳಲ್ಲಿ ರಥಯಾತ್ರೆ ನಡೆಯಲಿದೆ. ಆ.೨೫ರಂದು ನಂಜನಗೂಡು, ಬೇಗೂರು, ಗುಂಡ್ಲುಪೇಟೆ, ತೆರಕಣಾಂಬಿ. ಆ.೨೬ರಂದು ಚಾಮರಾಜನಗರ, ಸಂತೇಮರಹಳ್ಳಿ, ಯಳಂದೂರು, ಕೊಳ್ಳೇಗಾಲ, ಹನೂರು, ಕೌದಳ್ಳಿ. ಆ.೨೭ರಂದು ತಿ.ನರಸೀಪುರ, ಬನ್ನೂರು, ಕಿರುಗಾವಲು, ಮಳವಳ್ಳಿ, ಹಲಗೂರು, ಕೆ.ಎಂ.ದೊಡ್ಡಿ, ಮದ್ದೂರು, ಬೇಸಗರಹಳ್ಳಿ. ಆ.೨೮ರಂದು ಕೊಪ್ಪ, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ. ಆ.೨೯ರಂದು ಕಿಕ್ಕೇರಿ, ಕೆ.ಆರ್.ಪೇಟೆ, ಸಾಲಿಗ್ರಾಮ, ಪಿರಿಯಾಪಟ್ಟಣದಲ್ಲಿ ರಥಯಾತ್ರೆ ನಡೆಯಲಿದ್ದು, ಆ.೩೦ರಂದು ಹುಣಸೂರು ಮಾರ್ಗವಾಗಿ ಮೈಸೂರಿಗೆ ಹಿಂದಿರುಗಲಿದೆ. ಬಳಿಕ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಮಾರೋಪ ಸಮಾರಂಭ ಜರುಗಲಿದೆ.
* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…
ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…
ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…
ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…
ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…