ಜಿಲ್ಲೆಗಳು

ಮೈಸೂರು : ಸಾವರ್ಕರ್ ರಥಯಾತ್ರೆ ಉದ್ಘಾಟಿಸಿದ ಬಿಎಸ್‌ವೈ

ಮೈಸೂರು : ಆರ್‌ಎಸ್‌ಎಸ್‌ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಇಂದಿನಿಂದ ಆ. 30ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಹಮ್ಮಿಕೊಂಡಿರುವ  ‘ಸಾವರ್ಕರ್ ರಥಯಾತ್ರೆ’ಯನ್ನು ಇಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಉದ್ಘಾಟಿಸಿದರು.

ಸಾವರ್ಕರ್ ಅವರ ಬಗ್ಗೆ, ಅವರ ದೇಶಭಕ್ತಿ, ಹೋರಾಟಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವೀರ್ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ಆಯೋಜಿಸಗಿದ್ದು, ಯಾತ್ರೆಯು ಟೆರಿಷಿಯನ್ ಕಾಲೇಜು ಮಾರ್ಗವಾಗಿ ಕ್ಯಾತಮಾರನಹಳ್ಳಿ, ತಿಲಕನಗರ, ಮಾತೃ ಮಂಡಳಿ ವೃತ್ತ, ಟೆಂಟ್ ವೃತ್ತ, ವಿವೇಕಾನಂದ ನಗರ, ಚಾಮುಂಡಿಪುರಂ ವೃತ್ತ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಂಚಾರ ಮಾಡಲಿದೆ.

ಆ.24 ರ ನಾಳೆ ಮೈಸೂರು ಜಿಲ್ಲೆಯ ಜಯಪುರ, ಹಂಪಾಪುರ, ಎಚ್.ಡಿ.ಕೋಟೆ, ಸರಗೂರು ಭಾಗಗಳಲ್ಲಿ ರಥಯಾತ್ರೆ ನಡೆಯಲಿದೆ. ಆ.೨೫ರಂದು ನಂಜನಗೂಡು, ಬೇಗೂರು, ಗುಂಡ್ಲುಪೇಟೆ, ತೆರಕಣಾಂಬಿ. ಆ.೨೬ರಂದು ಚಾಮರಾಜನಗರ, ಸಂತೇಮರಹಳ್ಳಿ, ಯಳಂದೂರು, ಕೊಳ್ಳೇಗಾಲ, ಹನೂರು, ಕೌದಳ್ಳಿ. ಆ.೨೭ರಂದು ತಿ.ನರಸೀಪುರ, ಬನ್ನೂರು, ಕಿರುಗಾವಲು, ಮಳವಳ್ಳಿ, ಹಲಗೂರು, ಕೆ.ಎಂ.ದೊಡ್ಡಿ, ಮದ್ದೂರು, ಬೇಸಗರಹಳ್ಳಿ. ಆ.೨೮ರಂದು ಕೊಪ್ಪ, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ. ಆ.೨೯ರಂದು ಕಿಕ್ಕೇರಿ, ಕೆ.ಆರ್.ಪೇಟೆ, ಸಾಲಿಗ್ರಾಮ, ಪಿರಿಯಾಪಟ್ಟಣದಲ್ಲಿ ರಥಯಾತ್ರೆ ನಡೆಯಲಿದ್ದು, ಆ.೩೦ರಂದು ಹುಣಸೂರು ಮಾರ್ಗವಾಗಿ ಮೈಸೂರಿಗೆ ಹಿಂದಿರುಗಲಿದೆ. ಬಳಿಕ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಮಾರೋಪ ಸಮಾರಂಭ ಜರುಗಲಿದೆ.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

7 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

7 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

9 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

9 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

9 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

17 hours ago