Mysore
26
haze

Social Media

ಶುಕ್ರವಾರ, 13 ಮಾರ್ಚ್ 2026
Light
Dark

ಎಸ್ಸಿ, ಎಸ್ಟಿ ಹಿತರಕ್ಷಣಾ ಸಭೆ : ಸಮಸ್ಯೆ ಆಲಿಸಬೇಕಾದ ಅಧಿಕಾರಿಗಳೇ ಗೈರು!

ಗುಂಡ್ಲುಪೇಟೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಭೆಯನ್ನು ತಹಸಿಲ್ದಾರ್ ಅಧ್ಯಕ್ಷತೆಯಲ್ಲಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆಸಲಾಯಿತು.
ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಗೈರಾಗುತ್ತಿದ್ದಾರೆ, ಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ಹಾಕಬೇಕು ಎಂದು ಎಸ್ಸಿ ಎಸ್ಟಿ ಮುಖಂಡರು ಸಭೆಯಲ್ಲಿ ಒತ್ತಾಯಿಸಿದರು.
ತಹಸಿಲ್ದಾರ್ ರವಿಶಂಕರ್ ಮಾತನಾಡಿ, ಯಾರು ಕಳೆದ ಎರಡು ಸಭೆಗಳಿಗೆ ಬಾರದೆ ನಿರ್ಲಕ್ಷ್ಯ ಮಾಡಿದ್ದಾರೋ ಅವರ ಮೇಲೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದರು.
ಮುದ್ರಾ ಯೋಜನೆಯಲ್ಲಿ ಸಾಲ ಸೌಲಭ್ಯ ನೀಡುತ್ತಿಲ್ಲ, ಕೃಷಿ ಇಲಾಖೆಯಲ್ಲಿ ಎಸ್ಸಿ ಎಸ್ಟಿ ಯವರಿಗೆ ಸಮರ್ಪಕವಾಗಿ ಪವರ್ ಟಿಲ್ಲರ್ ನೀಡುತ್ತಿಲ್ಲ ಎಂಬ ದೂರುಗಳು ಕೇಳಿಬಂದವು. ಇದೇ ರೀತಿ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.
ತಹಸಿಲ್ದಾರ್ ರವಿಶಂಕರ್, ಪುರಸಭೆ ಅಧ್ಯಕ್ಷ ಪಿ.ಗಿರೀಶ್, ಉಪಾಧ್ಯಕ್ಷರಾದ ದೀಪಿಕಾ ಅಶ್ವಿನ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಂಜುಂಡೇಗೌಡ, ಬಿಇಒ ಶಿವಮೂರ್ತಿ, ಪುರಸಭೆ ಮುಖ್ಯಾಧಿಕಾರಿ ಹೇಮಂತ್ ರಾಜ್, ವೃತ್ತನಿರೀಕ್ಷಕ ಮುದ್ದುರಾಜ್, ಬಸವರಾಜು, ಪುರಸಭೆ ಸದಸ್ಯರಾದ ಅಣ್ಣ್ಂಯುಸ್ವಾಮಿ, ಶ್ರೀನಿವಾಸ್, ಸಿದ್ದಯ್ಯ, ಮಾಡ್ರಹಳ್ಳಿ ಸುಭಾಷ್, ಸೋಮಣ್ಣ , ರಂಗಸ್ವಾಮಿ, ನಾಗೇಂದ್ರ, ಮುತ್ತಣ್ಣ, ಎಸ್ಸಿ, ಎಸ್ಟಿ ಮುಖಂಡರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!