ಚಾಮರಾಜನಗರ: ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನನ ರದ್ದು ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಡಿ.. ೧೭ ರಂದು ಶನಿವಾರ ವಿಶ್ವವಿದ್ಯಾಲಯಗಳು ಮತ್ತು ಸಂಯೋಜತ ಕಾಲೇಜು ಬಂದ್‌ಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ (ನಗು) ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅಂದು ಜಿಲ್ಲೆಯಲ್ಲಿ ಕಾಲೇಜುಗಳನ್ನು ಬಂದ್ ಮಾಡಿಸಿ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ನಗರದಲ್ಲಿ ಮೆರವಣಿಗೆ ನಡೆಸಿ, ಶಾಂತಿಯುತವಾದ ಪ್ರತಿಭಟನೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿದ್ಯಾರ್ಥಿಗಳ ವಿರೋಧಿ ನೀತಿಯನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.
ರಾಜ್ಯ ಸರ್ಕಾರ ವಿದ್ಯಾರ್ಥಿಗಳ ವೇತನ ಕೊಡಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಫಲಿತಾಂಶವನ್ನು ಸರಿಯಾದ ಸಮಯಕ್ಕೆ ನೀಡುತ್ತಿಲ್ಲ. ಫಲಿತಾಂಶ ಸರಿಯಾದ ಸಮಯಕ್ಕೆ ನಿಡಬೇಕು. ವಿದ್ಯಾರ್ಥಿವೇತನ ತಕ್ಷಣ ಬಿಡುಗಡೆ ಮಾಡಬೇಕು ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡಬೇಕು. ಸರ್ಕಾರಿ ಕಾಲೇಜು ಶುಲ್ಕ ಕಡಿಮೆ ಮಾಡಬೇಕು ಇದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೇಡಿಕೆಯಾಗಿದೆ ಎಂದರು.
ಭಾರತ ರಾಷ್ಟ್ರೀಯ ವಿದ್ಯಾರ್ಥೀ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ರಫೀಕ್ ಅಲಿ ಮಾತನಾಡಿ, ಸರ್ಕಾರ ನಿಗದಿತ ವೇಳೆಯಲ್ಲಿ ವಿದ್ಯಾರ್ಥಿವೇತನ ಬಿಡುಗಡೆ ಮಾಡದ ಕಾರಣದಿಂದ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕರು ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ, ದೌರ್ಜನ್ಯ ನಡೆಸುತ್ತಿದ್ದಾರೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ. ಕೂಡಲೇ ವಿದ್ಯಾರ್ಥಿಗಳ ಸಮಸ್ಯೆಗಳನ್ನು ನಿವಾರಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಸ್ಟಾö್ಯನಿ ಬಾಲರಾಜು, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೈಯದ್ ಮೊಸಾಯಿಬ್, ಜಿಲ್ಲಾ ಕಾರ್ಯದರ್ಶಿ ದಿಲೀಪ್, ಕೊಳ್ಳೇಗಾಲ ಅಧ್ಯಕ್ಷ ದಸ್ತಗಿರಿ, ಸಾಗರ್, ವಿನಯ್ ಹಾಜರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…