ಚಾಮರಾಜನಗರ: ಎಸ್ಸಿ, ಎಸ್ಟಿ, ಒಬಿಸಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿವೇತನ ರದ್ದುಪಡಿಸಿರುವ ಆದೇಶ ಹಿಂಪಡಯಬೇಕು ಹಾಗೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ಜಿಲ್ಲಾ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನದ ಮುಂಭಾಗದಿAದ ಮೆರವಣಿಗೆ ಹೊರಟ ಫೋರ್ಸ್ನ ಮುಖಂಡರು, ವಿದ್ಯಾರ್ಥಿಗಳು ಭುವನೇಶ್ವರಿ ವೃತ್ತಕ್ಕೆ ತೆರಳಿ ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ಸಂಚಾರ ತಡೆ ನಡೆಸಿದರು. ನಂತರ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.
ಬಿವಿಎಫ್ ಜಿಲ್ಲಾಧ್ಯಕ್ಷ ಚಂದ್ರಕಾAತ್ ಮಾತನಾಡಿ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಬುಡಕಟ್ಟು ಹಾಗೂ ಅಲ್ಪಸಂಖ್ಯಾತರ ಇಲಾಖೆಯಿಂದ ಹೊರಡಿಸಿರುವ ಸುತ್ತೋಲೆ ಅನುಸಾರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಕೇವಲ ೯ ಮತ್ತು ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ನೀಡಬೇಕು ಎಂದಿದೆ ಎಂದು ತಿಳಿಸಿದರು.
೧ ರಿಂದ ೮ನೇ ತರಗತಿ ವಿದ್ಯಾರ್ಥಿಗಳು ಆರ್‌ಟಿಇ ಕಾಯ್ದೆಯಡಿ ಉಚಿತ ಶಿಕ್ಷಣ ಪಡೆಯುತ್ತಿರುವುದರಿಂದ ಅವರಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡುವಂತಿಲ್ಲ ಎನ್ನುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದ ೬ ರಿಂದ ೧೪ನೇ ವಯಸ್ಸಿನ ಮಕ್ಕಳಿಗೆ ಉಚಿತ, ಕಡ್ಡಾಯ ಶಿಕ್ಷಣ ಕೊಡಬೇಕೆನ್ನುವ ಪರಿಚ್ಚೇದ ೨೧-ಎ ಮತ್ತು ಪ್ರಭುತ್ವ ನಿರ್ದೇಶನ ತತ್ವ ಪರಿಚ್ಚೇದ ೪೫ನೇ ಉಲ್ಲಂಘನೆಯಾಗುತ್ತದೆ ಎಂದು ದೂರಿದರು.
ವಕೀಲ ಮಹೇಂದ್ರ ಮಾತನಾಡಿ, ಈ ಆದೇಶ ವಿರುದ್ದ ಎಸ್‌ಸಿ, ಎಸ್‌ಟಿ ಶಾಸಕರು ಚಕಾರವೆತ್ತಿಲ್ಲ. ವಿದ್ಯಾರ್ಥಿಗಳ ಪರಿಶ್ರಮ, ಮತದಿಂದ ಗೆದ್ದ ಶಾಸಕರಾದ ಎನ್.ಮಹೇಶ್ ಅವರು ಕೂಡ ಈ ವಿಚಾರದಲ್ಲಿ ಮೌನವಾಗಿರುವುದು ಸರಿಯಲ್ಲ. ಮಕ್ಕಳಿಗೆ ಸಮವಸ್ತç, ಶೂ. ಕೊಟ್ಟಿಲ್ಲ. ಎಸ್‌ಸಿ,ಎಸ್‌ಟಿ ಶಾಸಕರು ಬಾಯಿ ಮುಚ್ಚಿಕೊಂಡು ಕುಳಿತಿದ್ದಾರೆ ಎಂದು ಆರೋಪಿಸಿದರು. ನಂತರ ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಯೋಜಕ ರವಿಮೌರ್ಯ, ತಾಲೂಕು ಅಧ್ಯಕ್ಷ ಮನೋಜ್, ತಾಲೂಕು ಸಂಯೋಜಕ ಮಹೇಶ್, ಆಶ್ರೀತ್, ಮನೋಜ್, ರಾಮಸಮುದ್ರ ಬಾಬು, ಮಹೇಶ್, ರಾಜೇಂದ್ರ, ವಿದ್ಯಾರ್ಥಿಗಳಾದ ಮಹದೇವಸ್ವಾಮಿ, ಮಂಜು, ಮೋಹನ್, ಜ್ಯೋತಿ, ಚಂದ್ರಕಲಾ, ಉಷಾ, ಐಶ್ವರ್ಯ ಇತರರಿದ್ದರು.
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ…
ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…