ಹನೂರು : ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ವಿದ್ಯಾರ್ಥಿಗಳ ತೊಂದರೆ ಅನುಭವಿಸುತ್ತಿದ್ದಾರೆ ಕೂಡಲೇ ಅಧಿಕಾರಿಗಳು ಎಚ್ಚೆತ್ತು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ ಮಂಜುನಾಥ್ ಎಚ್ಚರಿಕೆ ನೀಡಿದರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿ ಅವರು ಮಾತನಾಡಿದರು.
ಅಜ್ಜಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ವಡ್ಡರ ದೊಡ್ಡಿ ಗ್ರಾಮದಲ್ಲಿ ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ರಾಮಪುರ ಹನೂರು, ಕೊಳ್ಳೇಗಾಲ ಕಾಲೇಜು ಶಾಲಾ ಕಾಲೇಜುಗಳಿಗೆ ತೆರಳುತ್ತಿದ್ದಾರೆ ಈ ವಿದ್ಯಾರ್ಥಿಗಳಿಗೆ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದ ಪರಿಣಾಮ ದುಬಾರಿ ಹಣ ನೀಡಿ ಆಟೋದಲ್ಲಿ ಹೋಗುವಂತಹ ಪರಿಸ್ಥಿತಿ ಬಂದಿದೆ.ಪೋಷಕರು ಸಹ ಕೂಲಿ ಮಾಡಿ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶ್ರಮಿಸುತ್ತಿದ್ದಾರೆ. ಇವರಿಗೆ ಅನುಕೂಲ ಕಲ್ಪಿಸಬೇಕಾದದ್ದು ಜನಪ್ರತಿನಿಧಿಗಳು ಅಧಿಕಾರಿಗಳ ಕರ್ತವ್ಯ ಎಂದರು.
ಶಾಸಕರೇ ಏನು ಮಾಡುತ್ತಿದ್ದೀರಿ : ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಆರ್ ನರೇಂದ್ರ ಅಧಿಕಾರಿಗಳನ್ನು ಹಿಡಿದಿದ್ದಲ್ಲಿಟ್ಟುಕೊಳ್ಳಲು ವಿಫಲರಾಗಿದ್ದಾರೆ. ಕ್ಷೇತ್ರ ವಿಸ್ತೀರ್ಣ ದೊಡ್ಡದು ಎಂದು ಭಾಷಣದಲ್ಲಿ ನೀವೇ ಹೇಳುತ್ತೀರಿ? ನಮ್ಮ ಕ್ಷೇತ್ರದ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ ಅಂತಹ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕಾದದ್ದು ನಿಮ್ಮ ಜವಾಬ್ದಾರಿ ಕ್ಷೇತ್ರದಲ್ಲೇಡೆ ಬಸ್ ಗಾಗಿ ಹಲವು ಪ್ರತಿಭಟನೆಗಳು ನಡೆಯುತ್ತಿದೆ ನೀವು ಏನು ಮಾಡುತ್ತಿದ್ದೀರಿ ಮುಂದಿನ ದಿನಗಳಲ್ಲಿ ನಿಮಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವ್ಯಂಗ್ಯವಾಡಿದರು.
ವಡ್ಡರದೊಡ್ಡಿ ಗ್ರಾಮದ ವೆಂಕಟಸ್ವಾಮಿ ಮಾತನಾಡಿ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಡಿಪೋ ವ್ಯವಸ್ಥಾಪಕರು ಉಪ ವಿಭಾಗಾಧಿಕಾರಿಗಳು ತಹಸಿಲ್ದಾರ್ ರವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದೇವೆ ಆದರೆ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಆದ್ದರಿಂದ ನಾಳೆ ಪತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ಈ ವೇಳೆ ಅಜ್ಜಿಪುರ ಗ್ರಾಪಂ ಉಪಾಧ್ಯಕ್ಷ ಕೃಷ್ಣಮೂರ್ತಿ, ಮುಖಂಡರುಗಳಾದ ವೆಂಕಟಸ್ವಾಮಿ, ಪೆದಗ ಬೋವಿ ಚಂದ್ರು, ಯಜಮಾನ ಮಾದೇವ ಹಾಜರಿದ್ದರು.





