ಮೈಸೂರು : ಶಾಲೆಯೊಳು ಕೆರೆಯೋ, ಕೆರೆಯೊಳು ಶಾಲೆಯೋ? ವಿಚಿತ್ರವನ್ನು ನೋಡಿದರೆ ನಿಮಗೆ ಇಂತಹದೊಂದು ಅನುಮಾನ ಬಾರದೆ ಇರದು. ಇಂಥ ಸನ್ನಿವೇಶ ನಿರ್ಮಾಣವಾಗಿರುವುದು ದೂರದಲ್ಲೆಲ್ಲೋ ಅಲ್ಲ, ಮೈಸೂರಿನಿಂದ 20 ಕಿಲೋಮೀಟರ್ ದೂರವಿರುವ ಗೋಪಾಲಪುರ ಗ್ರಾಮದಲ್ಲಿ.
ಜಯಪುರ ಹೋಬಳಿಗೆ ಸೇರಿದ ಗೋಪಾಲಪುರ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಆವರಣ ಜಲಾವೃತಗೊಂಡು ದಿನಗಳು ಉರುಳುತ್ತಿವೆ. ಶಿಕ್ಷಕರು ಮತ್ತು ಮಕ್ಕಳು ಓಡಾಡಲು ಪರದಾಟವಾಗಿದ್ದು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಪಕ್ಕದಲ್ಲಿರುವ ಮುಳ್ಳೂರು ಕೆರೆ ಕೋಡಿ ಹರಿದು ನೀರು ಹರಿದು ಜಲಾವೃತಗೊಂಡು 20 ದಿನಗಳು ಕಳೆಯುತ್ತಿವೆ. ಈಗಾಗಲೇ ಅಧಿಕಾರಿಗಳಿಗೆ ಅವ್ಯವಸ್ಥೆ ಸಂಬಂಧ ದೂರು ನೀಡಲಾಗಿದೆ ಆದರೆ, ಸ್ಥಳೀಯ ಜನಪ್ರತಿನಿಧಿಗಳಾಗಲಿ, ಶಿಕ್ಷಣ ಇಲಾಖೆ ಅಧಿಕಾರಿಗಳಾಗಲಿ ಈ ಬಗ್ಗೆ ನಿರ್ಲಕ್ಷ ವಹಿಸಿರುವುದು ಗ್ರಾಮಸ್ಥರ ಕಣ್ಣು ಕೆಂಪಾಗುವಂತೆ ಮಾಡಿದೆ ಶಾಲೆಯ ಮುಂಭಾಗದ ಆವರಣದ ಜಾಗದಲ್ಲಿ ಸಂಪೂರ್ಣ ನೀರು ನಿಂತಿರುವ ಹಿನ್ನೆಲೆಯಲ್ಲಿ ಓಡಾಡಲು ಸ್ಥಳವಿಲ್ಲದಂತಾಗಿದೆ. ಇದರಿಂದ ಶಾಲೆಯ ಹಿಂಭಾಗದಲ್ಲಿನ ಕಿರಿದಾದ ಜಾಗದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆ ಪ್ರವೇಶಿಸುತ್ತಿದ್ದಾರೆ. ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ನೀರು ತುಂಬಿದ ನಂತರ ಮಕ್ಕಳು ಶಾಲೆಗೆ ಹಾಜರಾಗುತ್ತಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಜೊತೆಗೆ ಶೌಚಾಲಯಕ್ಕೆ ನೀರು ತುಂಬಿಕೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಶಾಲೆಯ ಆವರಣದಲ್ಲಿ ನೀರು ನಿಂತು ಮಕ್ಕಳಿಗೆ ತೊಂದರೆಯಾಗುತ್ತಿರುವ ಕುರಿತು ಗ್ರಾಮಸ್ಥರು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದಾರೆ.ಈ ಬಗ್ಗೆ ಯಾವುದೇ ಅಗತ್ಯ ಕ್ರಮ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…