ಹನೂರು: ಕಳೆದ 2 ದಿನಗಳಿಂದ ಜಿಟಿಜಿಟಿ ಮಳೆ ಬೀಳುತ್ತಿರುವ ಹಿನ್ನೆಲೆ ಪಳನಿಮೇಡು ಶಾಲೆಯ ಮೇಲ್ಚಾವಣಿ ದುರಸ್ತಿ ಗೊಂಡಿರುವುದರಿಂದ ಮಳೆಯ ನೀರು ಶಾಲೆಯ ಒಳಗೆ ಬೀಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಕ್ಕೆ ತೀವ್ರ ತೊಂದರೆಯಾಗಿದೆ.
ತಾಲ್ಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಳನಿಮೇಡು ಗ್ರಾಮದಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ 130 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 130 ವಿದ್ಯಾರ್ಥಿಗಳಿಗೆ ಕೇವಲ 5 ಕೊಠಡಿ ಗಳಿದ್ದು ಇದರಲ್ಲಿ 2 ಮಂಗಳೂರು ಹಂಚಿನ ಕಟ್ಟಡಗಳು ತೀವ್ರ ದುರಸ್ತಿಗೊಂಡಿದೆ. ಇದಲ್ಲದೆ ಕೋತಿಗಳ ಹಾವಳಿ ಹೆಚ್ಚಿರುವುದರಿಂದ ಮೇಲ್ಚಾವಣಿ ದುರಸ್ತಿಗೊಂಡಿದೆ . ಇನ್ನೂ ಇರುವ 3 ಕೊಠಡಿಗಳು ಆರ್ ಸಿಸಿ ಕಟ್ಟಡ ಗಳಾಗಿದ್ದರೂ ಸಹ ಕಾಮಗಾರಿ ಅಪೂರ್ಣಗೊಂಡಿರುವುದರಿಂದ ಗೋಡೆಗಳು ಶಿಥಿಲ ಗೊಂಡಿದೆ.ಇದರಿಂದ ಮಳೆಗಾಲದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಲಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯ ಎಚ್ಚರಿಕೆ : ಪಳನಿಮೇಡು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ದುರಸ್ತಿಗೊಂಡಿರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹತ್ತಾರು ಬಾರಿ ಮನವಿ ಮಾಡಿದ್ದರು ಸಹ ದುರಸ್ತಿಗೆ ಕ್ರಮ ಕೈಗೊಂಡಿಲ್ಲ. ಇದರಿಂದ ನಮ್ಮ ವಿದ್ಯಾರ್ಥಿಗಳಿಗೆ ಯಾವುದಾದರು ಅವಘಡಗಳು ಸಂಭವಿಸಿದರೆ ಇದಕ್ಕೆ ಯಾರು ಹೊಣೆ? ಶೀಘ್ರವೇ ಸಂಬಂಧಪಟ್ಟ ಅಧಿಕಾರಿಗಳು ದುರಸ್ತಿಗೆ ಕ್ರಮ ಕೈಗೊಳ್ಳದಿದ್ದರೆ ನಮ್ಮ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸದೆ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪೋಷಕರು ಎಚ್ಚರಿಕೆ ನೀಡಿದ್ದಾರೆ.
ಶಾಲೆಯ ಮೇಲ್ಚಾವಣಿ ದುರಸ್ತಿಗೊಂಡಿರುವ ಬಗ್ಗೆ ಈಗಾಗಲೇ ಗಮನಕ್ಕೆ ಬಂದಿದ್ದು, ಮೇಲ್ಚಾವಣಿ ದುರಸ್ತಿಗೆ ಅನುದಾನ ನೀಡುವಂತೆ ಇಲಾಖೆಗೆ ಪತ್ರ ಬರೆಯಲಾಗಿದೆ.
ಶಿವರಾಜು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹನೂರು ಶೈಕ್ಷಣಿಕ ವಲಯ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…