ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಮನವಿ ಪತ್ರ ರವಾನೆ
ಮಳವಳ್ಳಿ : 1942 ರಲ್ಲಿ ಆರಂಭವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ಬೀಳುವ ಹಂತದಲ್ಲಿದ್ದು, ಇದನ್ನು ದುರಸ್ತಿ ಪಡಿಸಿ ಶಿಕ್ಷಣ ಪಡೆಯಲು ನೆರವು ನೀಡುವಂತೆ ಒತ್ತಾಯಿಸಿ ಶಾಲಾ ಮಕ್ಕಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ನಾಗೇಶ್ ಅವರಿಗೆ ಮನವಿ ಪತ್ರ ಬರೆದು ಅಂಚೆ ಮೂಲಕ ರವಾನಿಸಿ ಪತ್ರ ಚಳವಳಿ ನಡೆಸಿದರು.
ತಾಲ್ಲೂಕಿನ ಮೇಗಳಪುರದ ಸರ್ಕಾರಿ ಶಾಲೆಯನ್ನು ೧೯೪೨ರಲ್ಲಿ ನಿರ್ಮಾಣ ಮಾಡಲಾಗಿದ್ದು, ಪ್ರಸ್ತುತ ಗೋಡೆ ಬಿರುಕು ಬಿಟ್ಟಿದೆ. ಮಳೆ ಬಂದರೆ ಸೋರುತ್ತಿದೆ, ಕೂರಲು ಡೆಸ್ಕ್ ಇಲ್ಲದೆ ನೆಲದ ಮೇಲೆ ಕೂರುವಂತಾಗಿದೆ. ಕಟ್ಟಡ ನಿರ್ಮಿಸಿ ೮೦ ವರ್ಷವಾಗಿರುವುದರಿಂದ ಯಾವಾಗ ಕುಸಿಯುತ್ತದೋ, ಯಾವಾಗ ಬೀಳುತ್ತದೋ ಎಂಬ ಭಯವಿದೆ. ಇದರಿಂದ ಶಿಕ್ಷಣವನ್ನು ಅತಂಕದಲ್ಲಿ ಪಡೆಯಬೇಕಿದೆ. ಕೂಡಲೇ ಮುಖ್ಯಮಂತ್ರಿಗಳು ನಮ್ಮ ಮನವಿಯನ್ನು ಪರಿಷ್ಕರಿಸಿ ಶಾಲೆಯನ್ನು ದುರಸ್ತಿಪಡಿಸುವಂತೆ ಮಕ್ಕಳು ಸಾಮೂಹಿಕವಾಗಿ ಪತ್ರ ಚಳವಳಿ ನಡೆಸಿ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕ ಚುಂಚಣ್ಣ ಮಾತನಾಡಿ, ಕುಸಿಯುವ ಹಂತದಲ್ಲಿರುವ ಶಾಲಾ ಕಟ್ಟಡವನ್ನು ನೆಲಸಮ ಮಾಡಿ ಹೊಸ ಕಟ್ಟಡ ಕಟ್ಟಿಸಿಕೊಡುವಂತೆ ಹಾಗೂ ದುರಸ್ತಿಪಡಿಸುವಂತೆ ಈಗಾಗಲೇ ಸಂಬAಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ ಇಲ್ಲಿಯವರೆಗೆ ಯಾವುದೇ ಕೆಲಸ ಆಗಿಲ್ಲ. ಆದ್ದರಿಂದ ಗ್ರಾಮದ ದಾನಿಗಳು, ಉದ್ಯಮಿಗಳು, ಸಂಬAಧಪಟ್ಟ ಇಲಾಖೆಯವರು ಈ ಬಗ್ಗೆ ಕ್ರಮಕೈಗೊಂಡು ಶಾಲಾ ಕಟ್ಟಡವನ್ನು ದುರಸ್ತಿಪಡಿಸಿ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿ ಹಾಜರಿದ್ದರು. ಮೇಗಳಪುರದ ಶಾಲಾ ಕಟ್ಟಡವನ್ನು ದುರಸ್ತಿಪಡಿಸುವಂತೆ ವಿದ್ಯಾರ್ಥಿಗಳು ಸಿಎಂ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಕಳುಹಿಸಿದರು.
ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…