ಮೈಸೂರು : ಅಯೋಧ್ಯಾ ರಾಮ ಮಂದಿರದಲ್ಲಿ ವಿರಾಜಮಾನರಾಗಿರುವ ಶ್ರೀ ರಾಮ ಲಲ್ಲಾ ವಿಗ್ರಹದ ಶಿಲ್ಪಿ ಅರುಣ್ ಯೋಗಿರಾಜ್ ಸುತ್ತೂರು ಶ್ರೀಗಳ ಆಶಿರ್ವಾದ ಪಡೆದಿದ್ದಾರೆ.
ಆಯೋಧ್ಯಾ ರಾಮ ಮಂದಿರ ಉದ್ಘಾಟಣೆ ಬಳಿಕ ಮೈಸೂರಿಗೆ ಆಗಮಿಸಿದ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಎಲ್ಲೆಡೆ ಅಭೂತಪೂರ್ವ ಸ್ವಾಗತ ಸಿಕ್ಕಿದೆ.
ಈ ವೇಳೆ, ಇಂದು ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ ಅರುಣ್ ಯೋಗಿರಾಜ್ ಹಾಗು ಕುಟುಂಬದವರು ಸುತ್ತೂರು ಶ್ರೀಗಳಾದ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮಿಗಳಿಂದ ಆಶಿರ್ವಾದ ಪಡೆದಿದ್ದಾರೆ.