ಚಾಮರಾಜನಗರ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬAಧ ರಾಷ್ಟಿçÃಯ ತನಿಖಾ ದಳವು ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಮುಖಂಡ ಇಕ್ಬಾಲ್ ಬೆಳ್ಳಾರೆ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪಕ್ಷದ ಮುಖಂಡರು, ಕಾರ್ಯಕರ್ತರು ಸೋಮವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಭುವನೇಶ್ವರಿ ವೃತ್ತದ ತನಕ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪಕ್ಷದ ಜಿಲ್ಲಾಧ್ಯಕ್ಷ ಅಬ್ರಾರ್‌ಅಹಮ್ಮದ್ ಮಾತನಾಡಿ, ನೆಟ್ಟಾರು ಪ್ರಕರಣವನ್ನು ಮಾತ್ರ ಎನ್.ಐ.ಎಗೆ ಸರ್ಕಾರ ವಹಿಸಿದೆ. ಈ ಪ್ರಕರಣದಲ್ಲಿ ಎನ್.ಐ.ಎ ಸಾಕಷ್ಟು ಜನರನ್ನು ಬಂಧಿಸಿದ್ದರೂ ಯಾರ ಮೇಲೂ ಬಲವಾದ ಸಾಕ್ಷಿಗಳನ್ನು ಒದಗಿಸಲು ಸಾಧ್ಯವಾಗಿಲ್ಲ. ಬಿಜೆಪಿ ಸರ್ಕಾರದ ಒತ್ತಡಕ್ಕೆ ಮಣಿದು ಎನ್.ಐ.ಎ ಮತ್ತಷ್ಟು ಬಂಧನಗಳಿಗೆ ಮುಂದಾಗಿದೆ ಎಂದು ದೂರಿದರು.
ಬಿಜೆಪಿ ತನ್ನ ರಾಜಕೀಯ ಶತ್ರುಗಳನ್ನು ಮಟ್ಟ ಹಾಕಲು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಆದ್ದರಿಂದಲೇ ಅನೇಕ ಸಾಮಾಜಿಕ ಹೋರಾಟಗಾರರು, ಪ್ರಗತಿಪರ ಚಿಂತಕರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಜೈಲಿಗೆ ಹಾಕಲಾಗಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸೈಯದ್ ಆರೀಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್, ಜಿಲ್ಲಾ ಕಾರ್ಯದರ್ಶಿ ಜಬೀನೂರ್, ಜಿಲ್ಲಾ ಖಜಾಂಚಿ ನಯಾಜ್ ಉಲ್ಲಾ, ನಗರಸಭಾ ಸದಸ್ಯರಾದ ಕಲೀಲ್ ಉಲ್ಲಾ, ಮೊಹಮ್ಮದ್ ಅಮೀಕ್, ಅಪ್ಸರ್‌ಪಾಷ, ಜಾಕೀರ್ ಪಾಷ, ದಸಂಸ ಮುಖಂಡರಾದ ಸಂಘಸೇನಾ, ಬಂಗಾರಸ್ವಾಮಿ, ಪಿ.ಯು.ಸಿ.ಎಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವೆಂಕಟರಾಜು ಇತರರು ಪಾಲ್ಗೊಂಡಿದ್ದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…