ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶಬ್ ಅವರ ಫಾರಂ ಹೌಸ್ ನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಿಹಾರ ಮೂಲದ ವ್ಯಕ್ತಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 43 ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ.
ತಿ.ನರಸೀಪುರ ತಾಲ್ಲೂಕಿನ ಫಾರಂ ಹೌಸ್ನಲ್ಲಿ ಕುದುರೆಗಳಿಗೆ ಲಾಳ ಕಟ್ಟುವ ಕೆಲಸ ಮಾಡಿಕೊಂಡಿದ್ದ ನಜೀಮ್ ಎಂಬಾತ ಶಿಕ್ಷೆಗೆ ಗುರಿಯಾಗಿದ್ದಾನೆ.
ಈತ ಫಾರಂ ಹೌಸ್ನಲ್ಲಿ ಕೆಲಸ ಮಾಡುತ್ತಿದ್ದು 10 ವರ್ಷದ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ್ದರು. ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶೈಮಾ ಖಮ್ರೋಜ್ ಅವರು ಆರೋಪಿಗೆ 43 ವರ್ಷ ಶಿಕ್ಷೆ, 51 ಸಾವಿರ ದಂಡ ವಿಧಿಸಿದ್ದಾರೆ. ಜತೆಗೆ ಬಾಲಕಿ 7 ಲಕ್ಷ ರೂ. ಪರಿಹಾರ ಪಡೆಯಲು ಅರ್ಹಳು ಎಂದು ಆದೇಶ ಮಾಡಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…