ಹನೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು ಇಂದು ಸಂಜೆ ಆದೇಶ ನೀಡಿದೆ.
ತಾಲೂಕಿನ ಮಂಗಲ ಗ್ರಾಮದ ರಮೇಶ್ ಶಿಕ್ಷೆಗೊಳಗಾದ ಅಪರಾಧಿ. 2020 ರ ಸೆಪ್ಟೆಂಬರ್ ನಲ್ಲಿ ಅಪ್ರಾಪ್ತೆ ಒಬ್ಬಳಿಗೆ ಪ್ರೀತಿಸು ಎಂದು ಬಲವಂತ ಮಾಡಿ, ಇಲ್ಲದ ಆಸೆ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯ ಹಾಗೂ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ನಿಶಾರಾಣಿ ಅವರು ಅಪರಾಧಿಗೆ ಎರಡು ವರ್ಷ ಶಿಕ್ಷೆ, 5 ಸಾವಿರ ರೂ. ದಂಡ ವಿಧಿಸಿದ್ದಾರೆ. ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 20 ಸಾವಿರ ರೂ. ಪರಿಹಾರ ಕೊಡಬೇಕೆಂದು ಸೂಚಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ.ಯೋಗೆಶ್ ವಾದ ಮಂಡಿಸಿದ್ದರು.
ಮಂಡ್ಯ: ಸಕ್ಕರೆ ನಗರಿಯಲ್ಲಿ ಶುಕ್ರವಾರ ಆಕ್ಷರಶಃ ದೊಡ್ಡ ಜಾತ್ರೆಯ ಸೊಬಗು ಮನೆ ಮಾಡಿತ್ತು. ಎಲ್ಲಿ ನೋಡಿದರಲ್ಲಿ ಜನವೋ ಜನ; ಅದು…
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…