ಹನೂರು: ಕುರಿ ಕಳ್ಳತನ ಮಾಡಿದ್ದ ಆರೋಪಿ ಹಾಗೂ ಕುರಿಯನ್ನು ವಶಕ್ಕೆ ಪಡೆಯುವಲ್ಲಿ ರಾಮಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಪುದುರಾಮಾಪುರ ಗ್ರಾಮದ ವಿಶ್ವ ಅಲಿಯಾಸ್ ವಿಜಿ ಬಂಧಿತ ಆರೋಪಿಯಾಗಿದ್ದಾನೆ .
ಘಟನೆ ವಿವರ :ತೋಟದ ಜಮೀನಿನ ಮುಂಭಾಗದ ಕೊಟ್ಟಿಗೆಯಲ್ಲಿ ಕಟ್ಟಿದ್ದ 6ಸಾವಿರ ಮೌಲ್ಯದ 2ಗಂಡು ಕುರಿ ಕಳ್ಳತನವಾಗಿರುವ ಬಗ್ಗೆ ಮಣಿಕಂಠ ಎಂಬುವವರು ರಾಮಾಪುರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಪ್ರಸಾದ್, ವೃತ್ತ ನಿರೀಕ್ಷಕ ನಂಜುಂಡಸ್ವಾಮಿ ರವರ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗೆ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡಿದ್ದಾಗ, ಭಾನುವಾರ ರಾಮಪುರ ಗ್ರಾಮದಲ್ಲಿ ಜರುಗುವ ಭಾನುವಾರದ ವಾರದ ಸಂತೆಗೆ ka-05 jq0280 ಪಲ್ಸರ್ ಮೋಟಾರ್ ಬೈಕ್ ನಲ್ಲಿ 2 ಕುರಿಗಳನ್ನು ಮಾರಾಟ ಮಾಡಲು ತೆಗೆದುಕೊಂಡು ಬಂದಿದ್ದ ಆರೋಪಿ ವಿಶ್ವನನ್ನು ವಿಚಾರಣೆ ನಡೆಸಿದಾಗ ಕುರಿಗಳನ್ನು ಕಳ್ಳತನ ಮಾಡಿಕೊಂಡು ಬಂದು ಮಾರಾಟ ಮಾಡುತ್ತಿದ್ದೇನೆ ಎಂದು ಒಪ್ಪಿಕೊಂಡ ಹಿನ್ನೆಲೆ ಮೋಟಾರ್ ಬೈಕ್ ಹಾಗೂ ಕುರಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪೇದೆಗಳಾದ ಸೈಯದ್ ಮುಶ್ರಫ್, ರಮೇಶ್ ಕುಮಾರ್ ಲಿಯಾಕತ್ ಅಲಿ ಖಾನ್ ಪಾಲ್ಗೊಂಡಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…