ಮದ್ದೂರು: ತಾಲೂಕಿನ ಕುಂದನ ಕುಪ್ಪೆಯಲ್ಲಿ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ.
ಸುಮಾರು ಐದಾರು ಗಂಟೆಯಿಂದ
ಕೊಟ್ಟಿಗೆಯಲ್ಲಿ ಅವಿತು ಕುಳಿತಿರುವ ಚಿರತೆಯನ್ನು ಹಿಡಿಯಲು ಹೊರಗಡೆ ಬೋನು ಇಟ್ಟು ಅರಣ್ಯ ಇಲಾಖೆ ಸಿಬ್ಬಂದಿ ಕಾಯುತ್ತಿದ್ದಾರೆ. ಈ ಭಾಗದಲ್ಲಿ ಚಿರತೆ ಹಾವಳಿ ವಿಪರೀತವಾಗಿದ್ದು ಐದಾರು ತಿಂಗಳ ಹಿಂದೆ ನಾಲ್ಕು ಚಿರತೆಗಳನ್ನು ಸೆರೆ ಹಿಡಿಯಲಾಗಿತ್ತು.
ಆದರೆ ಚಿರತೆ ಮತ್ತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರೈತರು ತಮ್ಮ ಹೊಲಗದ್ದೆಗಳಿಗೆ ಹಗಲು ವೇಳೆ ಒಬ್ಬೊಬ್ಬರೇ ಹೋಗಲು ಸಹ ಭಯಭೀತರಾಗಿದ್ದಾರೆ.
ಶಾಲಾ ಮಕ್ಕಳು, ವೃದ್ಧರು ಮಹಿಳೆಯರು ಗ್ರಾಮದ ಹೊರಕ್ಕೆ ಹೋಗಲೂ ಭಯಪಡುವಂತಾಗಿದೆ
ಅರಣ್ಯ ಇಲಾಖೆಯವರು ಗ್ರಾಮಸ್ಥರ ನೆರವಿನೊಂದಿಗೆ ಬೋನುಗಳನ್ನು ಇಟ್ಟು ಚಿರತೆ ಹಿಡಿದು ಈ ಭಾಗದ ರೈತರ ಜೀವ ಉಳಿಸಲು ಮುಂದಾಗ ಬೇಕೆಂದು ಗ್ರಾಮದ ಮುಖಂಡ ಕುಂದನ್ ಕುಪ್ಪೆ ಕುಮಾರ್ ಅವರು ಒತ್ತಾಯಿಸಿದ್ದಾರೆ.
ಮೈಸೂರು: ಹೊಸ ವರ್ಷ 2025ರ ಆಗಮನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನತೆ ಸಂಭ್ರಮಾಚರಣೆ ಮಾಡಲು…
ಹಾಸನ/ಸಕಲೇಶಪುರ: ಕೇಂದ್ರ ಸರ್ಕಾರದ ನೆರವಿನೊಂದಿಗೆ ಕಾಫಿ ಬೆಳೆಗಾರರಿಗೆ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದಾರೆ. ಹಾಸನ…
ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…