ಹನೂರು: (ಕೊಳ್ಳೇಗಾಲ): ಹನೂರು ತಾಲೂಕಿನಿಂದ ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾದ ಹಿನ್ನೆಲೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶಿವಪುರ ಲೋಕೇಶ್ ರವರು ಶಾಸಕ ಆರ್ ನರೇಂದ್ರ ರವರನ್ನು ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಆರ್ ನರೇಂದ್ರ ಅವಿಭಾಜಿತ ಕೊಳ್ಳೇಗಾಲ ಹನೂರು ತಾಲೂಕಿನಿಂದ ಇದುವರೆಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕರಾಗಿ ಆಯ್ಕೆಯಾಗಿರಲಿಲ್ಲ, ಇದೀಗ ಖಾತೆ ತೆರೆದಿರುವುದು ಸಂತಸದ ವಿಚಾರ ಮುಂದಿನ ದಿನಗಳಲ್ಲಿ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಕೊಡಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿ, ಹಾಪ ಕಾಮ್ಸ್ ನಿಂದ ದೊರೆಯುವ ಸವಲತ್ತುಗಳನ್ನು ರೈತರಿಗೆ ದೊರಕಿಸಿ ಕೊಡುವ ನಿಟ್ಟಿನಲ್ಲಿ ಒತ್ತು ನೀಡಬೇಕು ಎಂದು ನೂತನ ನಿರ್ದೇಶಕ ಲೋಕೇಶ್ ಶಿವಪುರ ಅವರಿಗೆ ಸಲಹೆ ನೀಡಿದರು.
ನೂತನ ನಿರ್ದೇಶಕ ಶಿವಪುರ ಲೋಕೇಶ್ ಮಾತನಾಡಿ ನಾನು ಕೂಡ ರೈತ ಕುಟುಂಬದ ಸದಸ್ಯನಾಗಿದ್ದು ರೈತರ ಪರವಾಗಿ ಸದಾ ಹೋರಾಟ ಮಾಡುತ್ತೇನೆ, ತಾಲೂಕಿನಲ್ಲಿ ಅತಿ ಹೆಚ್ಚು ಜನಸಂಖ್ಯೆ ಇರುವ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಹಾಪ್ ಕಾಮ್ಸ್ ಮಳಿಗೆ ತೆರೆಯಲಾಗುವುದು ಎಂದು ತಿಳಿಸಿದರು.
ಈ ವೇಳೆ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಮದುವನಹಳ್ಳಿ ಶಿವಕುಮಾರ್, ಪಪಂ ಉಪಾಧ್ಯಕ್ಷ ಗಿರೀಶ್ ,ಮಾಜಿ ಸದಸ್ಯ ಮಾದೇಶ್ ಮುಖಂಡರುಗಳಾದ ಮಾದೇಶ್, ಕಣ್ಣೂರು ಮಹದೇವಸ್ವಾಮಿ, ಮಂಗಲ ಪುಟ್ಟರಾಜು,ವಾಸು ಇನ್ನಿತರರು ಹಾಜರಿದ್ದರು
ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…