Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ಬಹುಕಾಲದ ಆತ್ಮೀಯ ಸ್ನೇಹಿತನ ನಿಧನದಿಂದ ಆಘಾತಕ್ಕೀಡಾಗಿದ್ದೇನೆ : ಸಿದ್ದು ಸಂತಾಪ

ಮೈಸೂರು : ಅನಾರೋಗ್ಯದಿಂದ ಇಂದು ನಿಧನ ಹೊಂದಿದ ಸಮಾಜವಾದಿ ಚಿಂತಕ ಹಾಗೂ ಪ್ರಗತಿಪರ ಹೋರಾಟಗಾರ ಪ.ಮಲ್ಲೇಶ್ ಅವರ ನಿಧನ ಸಂಬಂಧ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ತಮ್ಮ ಟ್ವೀಟರ್‌ ನಲ್ಲಿ ಸಿದ್ದರಾಮಯ್ಯ ಅವರು “ಹಿರಿಯ ಸಮಾಜವಾದಿ ಚಿಂತಕ, ಪ್ರಗತಿಪರ ಹೋರಾಟಗಾರ ಮತ್ತು ನನ್ನ ಬಹುಕಾಲದ ಆತ್ಮೀಯ ಸ್ನೇಹಿತ ಪ.ಮಲ್ಲೇಶ್ ಅವರ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ.

ಅವರ ಸಾವು ಕರ್ನಾಟಕದ ಪಾಲಿಗೆ ತುಂಬಲಾರದ ನಷ್ಟ. ಮಲ್ಲೇಶ್ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ.” ಎಂದು ಬರೆದುಕೊಂಡಿದ್ದಾರೆ.

ಪ.ಮಲ್ಲೇಶ್‌ ರವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!