ಮೈಸೂರು: ರಾಜ್ಯ ಮಟ್ಟಕ್ಕೆ ಹೋಲಿಕೆ ಮಾಡಿದಲ್ಲಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದೆ. ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಮತ್ತು ಮೈಸೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಒಂದು ನಿಮಿಷದೊಳಗಿನ ಕಿರುಚಿತ್ರವನ್ನು ಚಿತ್ರೀಕರಿಸಲು ತೀರ್ಮಾನಿಸಿದೆ.
ಕಳೆದ ಬಾರಿಯ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023 ರ ಚುನಾವಣೆಯಲ್ಲಿ ಶೇಕಡವಾರು ಮತದಾನ ಪ್ರಮಾಣವು ರಾಜ್ಯ ಮಟ್ಟಕ್ಕೆ ಹೋಲಿಕೆ ಮಾಡಿದಲ್ಲಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದೆ.
ಇದನ್ನು ಮನಗಂಡ ಚುನಾವಣ ಆಯೋಗವು ಮತದಾನ ಪ್ರಕ್ರಿಯೆಯಲ್ಲಿ ನಗರ ವಾಸಿಗಳ ನಿರಾಸಕ್ತಿ’ ವಿಷಯದ ಕುರಿತು ಕಿರುಚಿತ್ರ ಸ್ಪರ್ಧೆ ಏರ್ಪಡಿಸಿದೆ. ಮತದಾರರ ಸಾಕ್ಷರತಾ ಸಂಘಗಳ ಮುಖೇನ ಎಲ್ಲಾ ಸಾರ್ವಜನಿಕರು ಹಾಗು ಕಾಲೇಜುಗಳ ವಿದ್ಯಾರ್ಥಿಗಳು ಮುಕ್ತವಾಗಿ ಭಾಗವಹಿಸಿ, ಜನವರಿ 10 ರೊಳಗಾಗಿ ವಿಡಿಯೋ ಚಿತ್ರೀಕರಿಸಿ ಸಲ್ಲಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಉತ್ತಮ ಚಿತ್ರಕ್ಕೆ ಬಹುಮಾನ: ಉತ್ತಮವಾದ ಕಿರುಚಿತ್ರಗಳಿಗೆ ಪ್ರಥಮ ಬಹುಮಾನ-5000/-, ದ್ವಿತೀಯ ಬಹುಮಾನ-3000/-ಹಾಗೂ ತೃತೀಯ ಬಹುಮಾನ2000/- ನೀಡಲಾಗುತ್ತದೆ ಎಂದು ಮೈಸೂರು ಮಹಾನಗರ ಪಾಲಿಕೆಯ ಉಪಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…