ಮೈಸೂರು: ಮೈಸೂರು ನಗರದ ಹೊರವಲಯದಲ್ಲಿರುವ ಸಿದ್ಧಲಿಂಗಪುರ ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಈ ವರ್ಷ ಷಷ್ಠಿ ಮಹೋತ್ಸವ ಆಚರಣೆಯನ್ನು ರದ್ದು ಮಾಡಲಾಗಿದೆ.
ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಪ್ರತಿವರ್ಷ ವಿಜೃಂಭಣೆಯಿಂದ ಈ ಇತಿಹಾಸ ಪ್ರಸಿದ್ಧ ಷಷ್ಠಿ ಮಹೋತ್ಸವ ಜಾತ್ರೆ ನಡೆಯುತ್ತಿತ್ತು. ಆದರೆ ದೇವಾಲಯದ ಪುನರ್ ನಿರ್ಮಾಣ ಕಾರ್ಯ ಹಿನ್ನೆಲೆ ನವೆಂಬರ್ 29 ರಂದು ನಡೆಯಬೇಕಿದ್ದ ಷಷ್ಠಿ ಮಹೋತ್ಸವವನ್ನು ರದ್ದು ಮಾಡಿ ಮೈಸೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ದೇವಸ್ಥಾನದ ಸಂಪ್ರದಾಯದಂತೆ ದೇಗುಲದ ಒಳಗೆ ಮಾತ್ರ ಷಷ್ಠಿ ಆಚರಣೆ ಮಾಡಲಿದ್ದು, ಸಾರ್ವಜನಿಕರಿಗೆ ಯಾವುದೇ ಪ್ರವೇಶವಿರುವುದಿಲ್ಲ. ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ ನಿಂದಾಗಿ ಷಷ್ಠಿ ಆಚರಣೆ ಆಗಿರಲಿಲ್ಲ. ಈ ವರ್ಷ ರಸ್ತೆ ಅಗಲೀಕರಣ ನೆಪದಲ್ಲಿ ದೇವಸ್ಥಾನ ಸ್ಥಳಾಂತರ, ದೇವಸ್ಥಾನ ಪುನರ್ ನಿರ್ಮಾಣ ಹಿನ್ನೆಲೆಯಲ್ಲಿ ಷಷ್ಠಿ ಮಹೋತ್ಸವನ್ನು ರದ್ದು ಮಾಡಲಾಗಿದೆ
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…